ನವದೆಹಲಿ : ದೆಹಲಿಯಿಂದ ಲೇಹ್‌ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂಡಿಗೋ ವಿಮಾನ 6E 2006 ಗುರುವಾರ ದೆಹಲಿಯಿಂದ ಲೇಹ್‌ಗೆ ಹೊರಟಿತ್ತು.ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನದಲ್ಲಿ 180 ಪ್ರಯಾಣಿಕರಿದ್ದರು, ಎಲ್ಲರೂ ಸುರಕ್ಷಿತವಾಗಿದ್ದಾರೆ.
ವಿಮಾನ ತುರ್ತು ಭೂಸ್ಪರ್ಶದ ನಂತರ, ಇಂಡಿಗೋದಿಂದ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

