By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ

ಕ್ರೀಡೆ-SportsLatest

ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ

IPL 2026: All eyes on Bengaluru's Chinnaswamy Stadium as carnival begins

Published March 28, 2026
Share
3 Min Read
IPL 2026 IPL 2026 IPL 2026
SHARE

ಬೆಂಗಳೂರು, ಮಾ.28: ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ ಕ್ರಿಕೆಟ್ ಲೀಗ್ ಆಗಿರುವ Indian Premier League (ಐಪಿಎಲ್) ಇಂದಿನಿಂದ ಭರ್ಜರಿಯಾಗಿ ಆರಂಭವಾಗುತ್ತಿದೆ. ಕಳೆದ 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುವ ಈ ಟೂರ್ನಿಯ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ.

ಕರ್ನಾಟಕ ಕ್ರಿಕೆಟ್‌ನ ಪವಿತ್ರ ತಾಣವೆನಿಸಿರುವ M. Chinnaswamy Stadium ನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಚಾಂಪಿಯನ್ ತಂಡ Royal Challengers Bengaluru ಗೆ ಇದು ತವರಿನ ವಿಶೇಷ ಸಂಭ್ರಮವಾಗಿದೆ.

ಬೆಂಗಳೂರು ನಗರದಲ್ಲಿ ಸುಮಾರು 18 ವರ್ಷಗಳ ಬಳಿಕ ಉದ್ಘಾಟನಾ ಪಂದ್ಯ ನಡೆಯುತ್ತಿರುವುದು ವಿಶೇಷವಾಗಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ ಘಟನೆಯ ಬಳಿಕ ಮತ್ತೆ ಕ್ರಿಕೆಟ್ ಹಬ್ಬಕ್ಕೆ ನಗರ ಸಜ್ಜಾಗಿದೆ. ಈ ಬಾರಿ ಟೂರ್ನಿ ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯಲಿದೆ. ಮೇ 24ರವರೆಗೆ ಲೀಗ್ ಹಂತದ ಪಂದ್ಯಗಳು ನಡೆಯಲಿದ್ದು, ಮೇ 31ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯೂ 10 ತಂಡಗಳು ಟ್ರೋಫಿಗಾಗಿ ಪೈಪೋಟಿ ನಡೆಸಲಿದ್ದು, ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಸಾಮಾನ್ಯವಾಗಿ ಪ್ರತಿದಿನ ಒಂದು ಪಂದ್ಯ ಮಾತ್ರ ನಡೆಯಲಿದ್ದು, ಕೆಲ ವಾರಾಂತ್ಯಗಳಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ 3.30ಕ್ಕೆ ಮೊದಲ ಪಂದ್ಯ ಹಾಗೂ ಸಂಜೆ 7.30ಕ್ಕೆ ಎರಡನೇ ಪಂದ್ಯ ಆರಂಭವಾಗಲಿದೆ.

ಟೂರ್ನಿಯಲ್ಲಿ ತಂಡಗಳನ್ನು ತಲಾ 5ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. Chennai Super Kings, Kolkata Knight Riders, Rajasthan Royals, Royal Challengers Bengaluru, Punjab Kings ಒಂದೇ ಗುಂಪಿನಲ್ಲಿ ಇದ್ದರೆ, Mumbai Indians, Sunrisers Hyderabad, Gujarat Titans, Delhi Capitals ಹಾಗೂ Lucknow Super Giants ಇನ್ನೊಂದು ಗುಂಪಿನಲ್ಲಿ ಸ್ಥಾನ ಪಡೆದಿವೆ.

ಪ್ರತಿ ತಂಡವು ತನ್ನ ಗುಂಪಿನ ತಂಡಗಳ ವಿರುದ್ಧ ತಲಾ ಒಂದು ಪಂದ್ಯ ಹಾಗೂ ಇನ್ನೊಂದು ಗುಂಪಿನ ತಂಡಗಳ ವಿರುದ್ಧ ತಲಾ ಎರಡು ಪಂದ್ಯಗಳನ್ನು ಆಡಲಿದೆ. ಈ ಮೂಲಕ ಪ್ರತಿ ತಂಡ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳನ್ನು ಆಡಲಿದೆ.

ಲೀಗ್ ಹಂತದ ಅಂತ್ಯದಲ್ಲಿ ಅಗ್ರ 2 ಸ್ಥಾನ ಗಳಿಸಿದ ತಂಡಗಳು ಕ್ವಾಲಿಫೈಯರ್-1ಕ್ಕೆ ಪ್ರವೇಶಿಸಲಿದ್ದು, 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪಂದ್ಯ ಆಡಲಿವೆ. ಕ್ವಾಲಿಫೈಯರ್-1ನಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶಿಸುವುದರ ಜೊತೆಗೆ, ಸೋತ ತಂಡಕ್ಕೆ ಮತ್ತೊಂದು ಅವಕಾಶ ದೊರೆಯಲಿದೆ. ಎಲಿಮಿನೇಟರ್‌ನಲ್ಲಿ ಗೆದ್ದ ತಂಡದ ವಿರುದ್ಧ ಆಡಲಿರುವ ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಫೈನಲ್‌ಗೆ ಪ್ರವೇಶಿಸಲಿದೆ.

ಐಪಿಎಲ್ 19ನೇ ಆವೃತ್ತಿ ಮತ್ತೆ ಕ್ರಿಕೆಟ್ ಪ್ರಿಯರ ಮನ ಸೆಳೆಯಲು ಸಜ್ಜಾಗಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ತಾರಕಕ್ಕೇರಿದೆ.

ತಡರಾತ್ರಿ 2ರವರೆಗೆ ಮೆಟ್ರೋ ಸಂಚಾರ
2026ರ Indian Premier League (ಐಪಿಎಲ್) ಆವೃತ್ತಿ ಇಂದಿನಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪಂದ್ಯ ದಿನಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು Bangalore Metro Rail Corporation Limited ಮಹತ್ವದ ನಿರ್ಧಾರ ಕೈಗೊಂಡಿದೆ. ಪಂದ್ಯ ಇರುವ ದಿನಗಳಲ್ಲಿ Namma Metro ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದೆ.

ಇಂದು (ಮಾ.28) Royal Challengers Bangalore (ಆರ್‌ಸಿಬಿ) ಮತ್ತು Sunrisers Hyderabad (ಎಸ್‌ಆರ್‌ಎಚ್‌) ನಡುವಿನ ಮೊದಲ ಪಂದ್ಯ ನಡೆಯಲಿದ್ದು, ಪಂದ್ಯ ವೀಕ್ಷಿಸಿ ಮನೆಗೆ ಹಿಂತಿರುಗುವ ಅಭಿಮಾನಿಗಳಿಗೆ ಈ ವ್ಯವಸ್ಥೆ ಸಹಾಯಕವಾಗಲಿದೆ.

ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಯ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಐಪಿಎಲ್ ಹಿನ್ನೆಲೆ, ಪಂದ್ಯ ಇರುವ ದಿನಗಳಲ್ಲಿ ಎಲ್ಲಾ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವಿಶೇಷವಾಗಿ Majestic Metro Station ನಿಲ್ದಾಣದಿಂದ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ.

ಇನ್ನೂ, ಐಪಿಎಲ್ ಪಂದ್ಯಗಳ ಟಿಕೆಟ್‌ಗಳಲ್ಲಿ ಈಗಾಗಲೇ ಮೆಟ್ರೋ ಕ್ಯೂಆರ್ ಕೋಡ್ ಮುದ್ರಣಗೊಂಡಿದ್ದು, ಕ್ರೀಡಾಂಗಣಕ್ಕೆ ಬರುವವರು Cubbon Park Metro Station ಅಥವಾ Mahatma Gandhi Road Metro Station ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ. ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

2,000 ಪೊಲೀಸರಿಂದ ಭದ್ರತೆ
ಇಂದು ಮೊದಲ ಪಂದ್ಯದಲ್ಲಿ ಆರ್‌ಸಿಬಿ vs ಸನ್‌ ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಮೊದಲ ಟೂರ್ನಿ ಇದಾಗಿರುವುದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಭದ್ರತೆಗೆ 2,000 ಪೊಲೀಸರನ್ನ (Bengaluru Police) ನಿಯೋಜಿಸಲಾಗಿದೆ. ಈ ಪೈಕಿ 7 ಸ್ಪೆಷಲ್‌ ಸ್ಕ್ವಾಡ್‌ಗಳನ್ನ ಮಾಡಲಾಗಿದೆ.

ಪಶ್ಚಿಮ ವಯಲಯದ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಪೊಲೀಸ್‌ ಭದ್ರತೆ ನೀಡಲಾಗುತ್ತಿದೆ. ಈಗಾಗಲೇ ಭದ್ರತೆ ಬಗ್ಗೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಇಂದು ಮಧ್ಯಾಹ್ನದಿಂದ ಪೊಲೀಸರು ನಿಯೋಜಿತ ಸ್ಥಳಗಳಲ್ಲಿ ಬಂದೋಬಸ್ತ್‌ ನೀಡಲಿದ್ದಾರೆ.

You Might Also Like

ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

IPL 2025 Final : RCB vs PBKS ಫೈನಲ್ ಪಂದ್ಯಕ್ಕೆ ಕ್ಷಣಗಣನೆ

ಕಾನ್‍ ಚಿತ್ರೋತ್ಸವದಲ್ಲಿ ಕನ್ನಡದ ಹುಡುಗನ ಚಿತ್ರಕ್ಕೆ ಮೊದಲ ಬಹುಮಾನ

Terrorist Doctor : ಗಣರಾಜ್ಯೋತ್ಸವದಂದೇ ಕೆಂಪು ಕೋಟೆ ಬಳಿ ಸ್ಫೋಟಕ್ಕೆ ಸಂಚು ಉಗ್ರ ವೈದ್ಯರು

TAGGED:Chinnaswamy StadiumIPL 2026
Share This Article
Facebook Copy Link Print
Previous Article KP Sharma Oli KP Sharma Oli KP Sharma Oli ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
Next Article road accident ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up