Iran-Israel War: ತನ್ನ ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕವೂ ಇರಾನ್, ಇಸ್ರೇಲ್ ಮೇಲಿನ ದಾಳಿ ಮುಂದುವರಿಸಿದೆ. ಇರಾನ್‌ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದೆ.
ಇರಾನ್‌ನ ಮಿಸೈಲ್‌ಗಳು ನಗರಕ್ಕೆ ಅಪ್ಪಳಿಸುತ್ತಿದ್ದಂತೆ ಇಸ್ರೇಲ್‌ನ ಕೆಲವು ಭಾಗಗಳಲ್ಲಿ ಸೈರನ್ ಮೊಳಗಿದೆ. ನಾಗರಿಕರನ್ನ ಸುರಕ್ಷಿತ ಸ್ಥಳಗಳು ಮತ್ತು ಬಂಕರ್‌ಗಳಿಗೆ ಸ್ಥಳಾಂತರಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಬಂಕರ್‌ಗಳಿಂದ ಆಚೆ ಬರದಂತೆ ಸೂಚಿಸಲಾಗಿದೆ. ನಾಗರಿಕೆನ್ನು ಗುರಿಯಾಗಿಸಿ ಇರಾನ್ ನಡೆಸಿದ ಈ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಮೆರಿಕ ದಾಳಿಗೂ ಜಗ್ಗದ ಇರಾನ್, ಇಸ್ರೇಲ್‌ನ ಹೈಫಾ ನಗರ, ರಾಜಧಾನಿ ಟೆಲ್ ಅವೀವ್, ಜೆರುಸಲೆಂ ಸೇರಿದಂತೆ 10ಕ್ಕೂ ಹೆಚ್ಚು ನಗರಗಳ ಮೇಲೆ ಮಿಸೈಲ್ ಮಳೆ ಸುರಿಸಿದೆ. ಮಿಸೈಲ್ ದಾಳಿಗೆ ಇಸ್ರೇಲ್‌ನ ಗಗನಚುಂಬಿ ಕಟ್ಟಡಗಳೇ ಧ್ವಂಸವಾಗಿವೆ. ಇದಕ್ಕೆ ಪ್ರತಿರೋಧ ತೋರಿದ ಇಸ್ರೇಲ್ ಮತ್ತೆ ದಾಳಿ ನಡೆಸಲು ಸಜ್ಜಾಗುತ್ತಿದೆ.
ಇರಾನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿದ್ದ ಯುದ್ಧದ ಮಧ್ಯಪ್ರವೇಶಿಸಿದ ಅಮೆರಿಕ, ಇರಾನ್‌ನ 3 ಪರಮಾಣು ಸ್ಥಾವರಗಳ ಮೇಲೆ ಬಾಂಬ್ ದಾಳಿ ನಡೆಸಿ, ಯಶಸ್ವಿಯಾಗಿ ನಾಶಪಡಿಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಪ್ರಕಟಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
.

