By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Iran-Israel War : ಪರಮಾಣು ಕೇಂದ್ರಗಳ ದಾಳಿ ನಡೆಸುವ ಮೂಲಕ ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೇರಿಕ ಎಂಟ್ರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - Iran-Israel War : ಪರಮಾಣು ಕೇಂದ್ರಗಳ ದಾಳಿ ನಡೆಸುವ ಮೂಲಕ ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೇರಿಕ ಎಂಟ್ರಿ

ವಿದೇಶ-InternationalLatestTop Stories

Iran-Israel War : ಪರಮಾಣು ಕೇಂದ್ರಗಳ ದಾಳಿ ನಡೆಸುವ ಮೂಲಕ ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೇರಿಕ ಎಂಟ್ರಿ

Iran-Israel War : Iran Fires Missiles At Israel Hours After US Bombs Iranian Nuclear Sites

Published June 22, 2025
Share
3 Min Read
US Attack US Attack US Attack
SHARE

Iran-Israel War : : ಕಳೆದ 8 ದಿನಗಳಿಂದ ನಡೆಯುತ್ತಿದ್ದ ಇರಾನ್‌-ಇಸ್ರೇಲ್‌ ಯದ್ಧಕ್ಕೆ ಅಮೇರಿಕ ತನ್ನ ಶಕ್ತಿಶಾಲಿ ಬಾಂಬ್ ದಾಳಿಯೊಂದಿಗೆ ಎಂಟ್ರಿಕೊಟ್ಟಿದೆ. ಎರಡು ವಾರಗಳ ಕಾಲ ಕಾದು ನೋಡುವ ಅಮೇರಿಕ ಅಧ್ಯಕ್ಷ ಟ್ರಂಪ್ ಹೇಳಿಕೆಯ ನಡುವೆ ಇದೀಗ ಇರಾನ್ ಇಸ್ರೇಲ್ ವಾರ್ ಗೆ )ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ.

ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಎಸ್ಪಹಾನ್‌ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ ನಡೆಸಿದೆ. 14,000 ಕೆಜಿ ತೂಕ ಹೊಂದಿರುವ ಹಾಗೂ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಎಂದು ಗುರುತಿಸಿಕೊಂಡಿರುವ ಬಿ-12 ಬಾಂಬರ್‌ ಬಳಸಿ ಅಮೆರಿಕ ದಾಳಿ ನಡೆಸಿದೆ.

ವರದಿಗಳ ಪ್ರಕಾರ, ಅಮೆರಿಕವು 6 ಶಕ್ತಿಶಾಲಿ Northrop B-2 Spirit ಯುದ್ಧವಿಮಾನ ಬಳಸಿಕೊಂಡು ಡಜನ್‌ಗಟ್ಟಲೇ ಜಿಬಿಯು -57 ಎ/ಬಿ ಬೃಹತ್ ಆರ್ಡ್‌ನೆನ್ಸ್ ಪೆನೆಟ್ರೇಟರ್ (MOP) ಬಾಂಬ್‌ಗಳನ್ನ ಬಳಸಿ ದಾಳಿ ನಡೆಸಿದೆ. ಇದನ್ನ ʻಬಂಕರ್‌ ಬಸ್ಟರ್‌ʼ ಎಂದೂ ಕರೆಯಲಾಗುತ್ತದೆ.

🚨FULL REMARKS: Commander in Chief & President Donald J. Trump Delivers Address to the Nation After US Air Force Bombs Three Iranian Nuclear Sites

"For 40 years, Iran has been saying 'Death to America."

Thank you President Trump for preventing World War III! pic.twitter.com/cSUPnBD4Lv

— AJ Huber (@Huberton) June 22, 2025

ಈ ʻಬಂಕರ್‌ ಬಸ್ಟರ್‌ʼ ಇರಾನ್‌ ರಾಜಧಾನಿ ಟೆಹ್ರಾನ್‌ನಿಂದ 100 ಕಿಮೀ ದೂರದಲ್ಲಿರುವ ಫೋರ್ಡೋ ಘಟಕದ ಮೇಲೆ ದಾಳಿ ಮಾಡಿದ್ರೆ, ಜಲಾಂತರ್ಗಾಮಿ ನೌಕೆಗಳಿಂದ ಹಾರಿಸಲಾದ 30 ಟೊಮಾಹಾಕ್ ಕ್ಷಿಪಣಿಗಳು ಉಳಿದ 2 ಅಣು ಕೇಂದ್ರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿವೆ.

ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಟ್ರಂಪ್ ಹೇಳಿದ್ದಾರೆ.

Damn this is big, US bombs 3 Iranian NUCLEAR SITES — Fordow, Natanz & Isfahan, announces President Donald Trump.

World War 3 happening?? pic.twitter.com/Jyf9VNbDjc

— AbhishekkkK10 (@Abhishekkkk10) June 22, 2025

ಇರಾನ್ ಮತ್ತೆ ಕ್ಷಿಪಣಿ ದಾಳಿ :
ಅಮೆರಿಕದ ದಾಳಿಯಿಂದ ಕುಗ್ಗದ ಇರಾನ್(Iran) ಇಸ್ರೇಲ್(Israel) ಮೇಲೆ ಮತ್ತೆ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಸ್ವಲ್ಪ ಸಮಯದ ಹಿಂದಷ್ಟೇ ಅಮೆರಿಕವು ಇರಾನ್​ನ ಮೂರು ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿತ್ತು. ಅಷ್ಟೇ ಅಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈಗ ಶಾಂತಿ ಸ್ಥಾಪನೆಯಾಗದಿದ್ದರೆ, ದೊಡ್ಡ ಪರಿಣಾಮವನ್ನು ಎದುರಿಸಬೇಕಾದೀತು ಎಂದು ಇರಾನ್​ಗೆ ಎಚ್ಚರಿಕೆ ನೀಡಿದ್ದರು. ಆದರೂ ಇರಾನ್ ತನ್ನ ದಾಳಿಯನ್ನು ಮುಂದುವರೆಸಿದೆ. ಅಮೆರಿಕದ ದಾಳಿಯಿಂದ ಇರಾನ್​​ನಲ್ಲಿ ಪರಮಾಣು ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದೀಗ ಮತ್ತೆ ಇರಾನ್ ತನ್ನ ದಾಳಿ ಮುಂದುವರೆಸಿದ್ದು, ಟೆಲ್ ಅವೀವ್, ಹೈಫಾ ಮತ್ತು ಜೆರುಸಲೆಮ್‌ನಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಇರಾನ್‌ನ ಇತ್ತೀಚಿನ ದಾಳಿಯಲ್ಲಿ ಸುಮಾರು 25 ಕ್ಷಿಪಣಿಗಳು ಇದ್ದವು ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿಯನ್ನು ವಾರ್​​ರೂಂನಲ್ಲೇ ಕುಳಿತು ವೀಕ್ಷಿಸಿದ್ದ ಟ್ರಂಪ್ :
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಇರಾನ್‌ನ ಮೂರು ಪರಮಾಣು ತಾಣಗಳನ್ನು ನಾಶಪಡಿಸಿದೆ ಎಂದು ಹೇಳಿಕೊಂಡಿದ್ದಾರೆ. ಹಲವು ದಿನಗಳ ಚರ್ಚೆಯ ನಂತರ ಮತ್ತು ಸ್ವತಃ ವಿಧಿಸಿಕೊಂಡ ಎರಡು ವಾರಗಳ ಗಡುವಿಗೆ ಬಹಳ ಹಿಂದೆಯೇ, ಟ್ರಂಪ್ ತನ್ನ ಪ್ರಮುಖ ಪ್ರತಿಸ್ಪರ್ಧಿ ಇರಾನ್ ವಿರುದ್ಧ ಕಾರ್ಯಾಚರಣೆ ನಡೆಸಿದೆ.

image image image

ಅಮೆರಿಕ ಸೇನೆ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದಾಗ, ಅಧ್ಯಕ್ಷ ಟ್ರಂಪ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಅವರೊಂದಿಗೆ ವಾರ್​ ರೂಂನಲ್ಲಿ ಹಾಜರಿದ್ದರು ಮತ್ತು ಪ್ರತಿಯೊಂದು ಚಟುವಟಿಕೆಯ ಮೇಲೆ ನಿಗಾ ಇಡುತ್ತಿದ್ದರು ಎಂದು ಶ್ವೇತಭವನ ಹೇಳಿದೆ.

ಅಮೆರಿಕ ಸೇನೆ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದಾಗ, ಅಧ್ಯಕ್ಷ ಟ್ರಂಪ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಅವರೊಂದಿಗೆ ವಾರ್​ ರೂಂನಲ್ಲಿ ಹಾಜರಿದ್ದರು ಮತ್ತು ಪ್ರತಿಯೊಂದು ಚಟುವಟಿಕೆಯ ಮೇಲೆ ನಿಗಾ ಇಡುತ್ತಿದ್ದರು ಎಂದು ಶ್ವೇತಭವನ ಹೇಳಿದೆ.

ಪರಮಾಣು ಸೋರಿಕೆಯಾಗಿಲ್ಲ: ಇರಾನ್ ಸ್ಪಷ್ಟನೆ
ಇರಾನ್​​ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಪರಮಾಣು ಸೋರಿಕೆಯಾಗಿಲ್ಲ ಎಂದು ಇರಾನ್(Iran) ಸ್ಪಷ್ಟಪಡಿಸಿದೆ. ದಾಳಿ ವೇಳೆ ಪರಮಾಣು ಸೋರಿಕೆಯಾಗಿಲ್ಲ, ಮೂರು ಪರಮಾಣು ಕೇಂದ್ರಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು ಹಾಗಾಗಿ ಯಾವುದೇ ಪರಮಾಣು ಸೋರಿಕೆ ಸಂಭವಿಸಿಲ್ಲ ಎಂದು ಇರಾನ್ ಹೇಳಿದೆ. ಹಾಗೆಯೇ ಅಮೆರಿಕ ತಮ್ಮ ಮೇಲೆ ನಡೆಸಿದ ದಾಳಿಯನ್ನು ಇರಾನ್ ಖಂಡಿಸಿದ್ದು, ಇಂತಹ ದಾಳಿಗಳು ವಿಶ್ವದ ಶಾಂತಿಗೆ ಅಪಾಯಕಾರಿ. ಅಮೆರಿಕವು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಹೇಳಿದೆ.

400 ದಾಟಿದ ಸಾವಿನ ಸಂಖ್ಯೆ :
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಪ್ರಮುಖ ಉಲ್ಬಣದಲ್ಲಿ, ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದೆ ಎಂದು ಹೇಳಿಕೊಂಡಿದ್ದರು. ಇರಾನ್‌ನಲ್ಲಿ, ಸಂಘರ್ಷದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 400 ದಾಟಿದೆ.

ಇರಾನ್ ಆರೋಗ್ಯ ಸಚಿವಾಲಯವು 430 ಸಾವುಗಳನ್ನು ವರದಿ ಮಾಡಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದಲ್ಲಿ ಇಸ್ರೇಲಿ ದಾಳಿಗಳು ಮತ್ತು ದಾಳಿಗಳಿಂದಾಗಿ 3,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಳೆದ ವಾರ ಸಂಘರ್ಷ ಉಲ್ಬಣಗೊಂಡ ನಂತರ ಇಸ್ರೇಲ್‌ನಲ್ಲಿ ಕನಿಷ್ಠ 24 ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.

You Might Also Like

ಆಸಿಡ್ ದಾಳಿ ಮಾಡಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೊಳಗಾದ ಮಾಲೀಕನೇ ವಿಲನ್

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ :‌ ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ

ಅಡುಗೆ ಎಣ್ಣೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ

ವಿಜಯ್ ಜೊತೆ ರಾಜಕೀಯಕ್ಕೆ ಬರೋಕೆ ಸಜ್ಜಾದ ವಿಶಾಲ್

ಮತ್ತೊಂದು ವಿವಾದದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್‌

TAGGED:Iran-Israel WarNuclear SitesUS Military
Share This Article
Facebook Copy Link Print
Previous Article Shivamof Shivamof Shivamof ಕುಡಿದ ನಶೆಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ಸಾವು
Next Article Rajnikant Rajnikant Rajnikant ಮೈಸೂರಿನಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಪ್ರತ್ಯಕ್ಷ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up