ಗಾಜಾ: ಗಾಜಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಒಂದೇ ದಿನ 91 ಸಾವು ಸಾವನ್ನಪ್ಪಿದ್ದಾರೆ.
ಗಾಜಾದ ಅತಿದೊಡ್ಡ ನಗರ ಕೇಂದ್ರವನ್ನು ವಶಪಡಿಸಿಕೊಳ್ಳಲು ವಾಯು ಮತ್ತು ಭೂಸೇನಾ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಇಸ್ರೇಲಿ ಪಡೆಗಳು ಒಂದೇ ದಿನದಲ್ಲಿ ಗಾಜಾದಲ್ಲಿ 91 ಪ್ಯಾಲೆಸ್ಟೀನಿಯನ್ನರನ್ನು ಹತ್ಯೆ ಮಾಡಿವೆ.
ಪ್ರಮುಖ ವೈದ್ಯರ ಕುಟುಂಬ ಸದಸ್ಯರು ಮತ್ತು ಉತ್ತರ ಗಾಜಾ ನಗರದ ಹಲವಾರು ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ವಸತಿ ಮನೆಗಳು, ಆಶ್ರಯ ತಾಣಗಳು ಹಾಗೂ ಗಾಜಾದಿಂದ ಬೇರೆಡೆಗೆ ನಾಗರಿಕರನ್ನು ಸಾಗಿಸುತ್ತಿದ್ದ ಟ್ರಕ್‌ನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಈ ದಾಳಿಗಳಲ್ಲಿ ಕನಿಷ್ಠ 76 ಮಂದಿ ಸಾವಿಗೀಡಾಗಿದ್ದಾರೆ. ಟೆಲ್ ಅವೀವ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

