ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubbali) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ (BJP) ತರಟೆಗೆ ತೆಗೆದುಕೊಂಡಿದೆ.

ಕಾಂಗ್ರೆಸ್ (Congress) ಬ್ರದರ್ಸ್ ಗಳಿಂದ ಹಿಂದೂ (Hindhu) ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ಹೊರಗೆ ಬರುವುದೇ ಕಷ್ಟವಗಿದೆ ಎಂದು ಬಿಜೆಪಿ ಎಕ್ಸ್ನಲ್ಲಿ (X) ಪೋಸ್ಟ್ ಹಾಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಸುರಕ್ಷತೆ ಇಲ್ಲ ಎಂದು ಬಿಜೆಪಿ ಆಕ್ರೋಶ ಹೊರಹಕಿದೆ.

