ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು.
ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹಾಗೆ ಹೇಳುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು. ಈಗ ಪ್ರಿಯಾಂಕಾ ಗಾಂಧಿ ನ್ಯಾಯಾಲಯದ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

