ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದೆ.
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರು ಮನವಿ ಮಾಡಿದ್ದಾರು.
ಆದ್ರೆ, ಕೃಷ್ಣ ಎಸ್ ದೀಕ್ಷಿತ್ ಅವರಿದ್ದ (S.Deekshith) ಹೈಕೋರ್ಟ್ ಪೀಠ, ತನಿಖೆ ನಡೆಯಲಿ. ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಹೊಳೆನರಸೀಪುರ ಪ್ರಕರಣದಲ್ಲಿ ಎರಡೂ ವಾರಗಳ ಕಾಲ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ಇದನ್ನೂ ಓದಿ: UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು
ಪ್ರಜ್ವಲ್ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು. ಇದೇ ವೇಳೆ ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ಅರ್ಜಿ- ಸಿಬಿಐಗೆ ನೋಟಿಸ್
ಪ್ರಜ್ವಲ್ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್ ಹೇಳಿದ್ದಾರೆನ್ನಲಾಗಿದೆ. ಇದನ್ನೂ ಓದಿ: ಟಾಲಿವುಡ್ ನಟ ರಾಜ್ ತರುಣ್ ವಿರುದ್ಧ ಪ್ರೇಯಸಿಯಿಂದಲೇ ದೂರು
ಈ ನಡುವೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಜ್ವಲ್ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಮಂಡ್ಯ: 100 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ

