ಮುಂಬೈ : ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವಂದತಿಗೆ ರೈಲಿನ ಚೈನ್ ಎಳೆದು ನಿಲ್ಲಿಸಿ, ರೈಲಿನಿಂದ ಇಳಿದವರ ಮೇಲೆ ಮತ್ತೊಂದು ರೈಲು ಹರಿದು 11ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಸಂಭವಿಸಿದೆ.
ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭೀಕರ ರೈಲು ದುರಂತ ಸಂಭಿವಿಸಿದ್ದು. ಜಲಂಘಾವ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಪುಷ್ಕರ್ ರೈಲಿನಲ್ಲಿ ಬೆಂಕಿ ಬಿದ್ದಿದೆ ಎಂಬ ವಂದತಿಯಿಂದ ರೈಲಿನಲ್ಲಿದ್ದ ಜನರು ರೈಲಿನಿಂದ ಪಕ್ಕದ ಹಳಿ ಮೇಲೆ ಜಿಗಿದಿದ್ದರು. ಇದೇ ವೇಳೆಯಲ್ಲಿ ಆ ಹಳಿ ಮೇಲೆ ಕರ್ನಾಟಕ ಎಕ್ಸ್‌ಪ್ರೆಸ್ ವೇಗವಾಗಿ ಬಂದಿದ್ದು. ಹಳಿ ಮೇಲಿದ್ದ ಪ್ರಯಾಣಿಕರಿಗೆ ಡಿಕ್ಕಿಯಾಗಿದೆ.
ಜಲಗಾಂವ್ ಜಿಲ್ಲೆಯ ಪಚೋರಾ ತಾಲೂಕಿನ ಜಲಗಾಂವ್ – ಮುಂಬಯಿ ರೈಲು ಮಾರ್ಗದಲ್ಲಿ ಮಹಿಜಿ ಮತ್ತು ಪರ್ಧಾಡೆ ನಿಲ್ದಾಣಗಳ ನಡುವೆ ಈ ಭೀಕರ ಘಟನೆ ಸಂಭವಿಸಿದೆ. ಲೋಕೋಪೈಲೆಟ್ ಸಿಗ್ನಲ್ ಸಿಕ್ಕ ಹಿನ್ನಲೆ ಪುಷ್ಪಕ್ ಎಕ್ಸ್‌ಪ್ರೆಸ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ರೈಲಿನ ಗಾಲಿಗಳಿಂದ ಬೆಂಕಿ ಕಿಡಿ ಹೊರಬಂದಿದೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಭೀತಿಯಲ್ಲಿ ಕೆಲ ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದಾರೆ. ಈ ವೇಳೆ ಹಲವರು ಅಪಾಯದಿಂದ ಪಾರಾಗಲು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಬಂದಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದಾಗಿ ಸಾವು ನೋವು ಜಾಸ್ತಿಯಾಗಿದೆ.
ಈ ಭೀಕರ ರೈಲು ಅಪಘಾತದಲ್ಲಿ ಕನಿಷ್ಟ11 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಹೊರಬಂದಿದ್ದು. ಘಟನಾ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದೇಶಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

