– ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ?
ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ (JDS-BJP) ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (Yediyurappa) ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ, ಮೈತ್ರಿ ಇರುತ್ತದೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ನಡ್ಡಾರವರು ಇಂದು ಸಂಜೆ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ಪ್ರಕರಣ: ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್

400ಕ್ಕೂ ಹೆಚ್ಚು ಸ್ಥಾನ ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ 50 ದಿನಗಳ ಸೆರೆವಾಸಕ್ಕೆ ಮಧ್ಯಂತರ ವಿರಾಮ: ಇಂದು ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ
ಕನಿಷ್ಠ 24-25 ಸ್ಥಾನಗಳನ್ನು ನಾವು ರಾಜ್ಯದಲ್ಲಿ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು. ಇದನ್ನೂ ಓದಿ: SSLC ವಿದ್ಯಾರ್ಥಿನಿ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ – ಇನ್ನೂ ಪತ್ತೆಯಾಗದ ರುಂಡ

