ಉಡುಪಿ : ನಟ ರಿಷಬ್ ಶೆಟ್ಟಿ ಜೊತೆ ತೆಲುಗಿನ ಖ್ಯಾತ ನಟ ಜೂ ಎನ್ಟಿಆರ್ ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇವರ ಜೊತೆ ನಿರ್ದೇಶಕ ಪ್ರಶಾಂತ್ ನೀಲ್ ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ.



ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಹೆಸರಿನ ಸಿನಿಮಾದಲ್ಲಿ ಜೂ ಎನ್ಟಿಆರ್ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಮುನ್ನ ದೇವರ ದರ್ಶನ ಮತ್ತು ಆಶೀರ್ವಾದ ಪಡೆಯಲೆಂದು ಜೂ ಎನ್ಟಿಆರ್ ಕರ್ನಾಟಕಕ್ಕೆ ಬಂದಿದ್ದಾರೆ.
ಜೂ ಎನ್ಟಿಆರ್ ತಾಯಿ ಹನ ಉಡುಪಿ ಮೂಲದವರೇ ಆಗಿದ್ದಾರೆ. ಹಾಗಾಗಿ ಜೂ ಎನ್ಟಿಆರ್ಗೆ ಕರ್ನಾಟಕದೊಂದಿಗೆ ವಿಶೇಷ ಬಂಧವಿದೆ. ಕನ್ನಡವನ್ನು ಮಾತನಾಡಬಲ್ಲ, ಅರ್ಥ ಮಾಡಿಕೊಳ್ಳಬಲ್ಲ ಜೂ ಎನ್ಟಿಆರ್, ಈ ಹಿಂದೆ ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ರಿಷಬ್ ಶೆಟ್ಟಿ ಜೊತೆಗೂ ಸಹ ಈ ಬಗ್ಗೆ ಮಾತನಾಡಿ ತಮ್ಮ ಮೆಚ್ಚುಗೆ ತಿಳಿಸಿದ್ದರು. ಇದರಿಂದ ಇಬ್ಬರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಯಾಗಿತ್ತು.