ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣ ಅರೆಸ್ಟ್ ಆಗಿದ್ದಾರೆ. ಈ ಕುರಿತು ಸ್ಯಾಂಡಲ್‌ವುಡ್ ನಟ-ನಟಿಯರು ಪ್ರತಿಕ್ರಿಸುತ್ತಿದ್ದಾರೆ. ಕಿಚ್ಚ ಸುದೀಪ್, ಉಪೇಂದ್ರ ಅವರು ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದರು. ಇದೀಗ ನಟಿ ಅನುಷಾ ರೈ (Actress Anusha Rai) ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಪ್ರಕರಣದ ವಿಚಾರವಾಗಿ ಅನುಷಾ ರೈ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ, ಅಪರಾಧಿಯಾಗಿಲ್ಲ ಎಂದು ಸುಧೀರ್ಘವಾಗಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ನನಗೆ ವರ್ಷದ 365 ದಿನವೂ ಊಟ ಹಾಕ್ತಾರೆ. ಆದರೆ ನಾನು ಹುಟ್ಟುಹಬ್ಬದ ಒಂದು ದಿನ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ದರ್ಶನ್. ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ : ಬಿ.ಸಿ ಪಾಟೀಲ್\

ಮೈಮೇಲೆ ಆತರ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ ಅಮ್ಮನ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ನನ್ನ ಸೆಲೆಬ್ರಿಟೀಸ್ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ. ನಾನು ಕಾರಲ್ಲಿ ಸ್ಪೀಡಾಗಿ ಹೋಗೊವಾಗ ಹಿಂದೆ ಬರಬೇಡಿ, ಅಕಸ್ಮಾತ್ ಆಕ್ಸಿಡೆಂಟ್ ಆಗಿ ಹೆಚ್ಚು ಕಮ್ಮಿ ಆದ್ರೆ ನಿಮ್ಮ ಕುಟುಂಬದ ಗತಿ ಏನು ಎಂದು ಅಭಿಮಾನಿಗಳಿಗೆ ಪ್ರೀತಿಯಿಂದ ಕಾಳಜಿಯಿಂದ ಬುದ್ಧಿವಾದ ಹೇಳಿದ್ದ ಈ ಮೈಸೂರಿನ ಆರಡಿಯ ತೂಗುದೀಪ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಬರೆದುಕೊಂಡಿದ್ದಾರೆ.

ಅವರಿಂದ ಇಂತಹ ತಪ್ಪಾಯಿತೆಂದರೆ ನಂಬಲು ಅಸಾಧ್ಯ. ಅದೇನೆ ಆದರೂ ಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ. ಮುಂದೆ ಕಾದು ನೋಡೋಣ. ಇದನ್ನೂ ಓದಿ: ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ NIA ಹೆಗಲಿಗೆ

ಇನ್ನು ಈ ಅನಾಹುತಕ್ಕೆ ಬಲಿಯಾದ ರೇಣುಕಾಸ್ವಾಮಿಗೂ ಅವರ ಕುಟುಂಬಕ್ಕೂ ಆ ದೇವರು ದುಃಖವನ್ನು ಭರಿಸೊ ಶಕ್ತಿ ನೀಡಲಿ. ಅವರು ಮಾಡಿದ್ದು ಸಹ ತಪ್ಪೇ ಆದರೂ ಈರೀತಿಯ ಶಿಕ್ಷೆ ಸರಿಯಲ್ಲ. ಕಾನೂನಿನ ಪ್ರಕಾರವೇ ರೇಣುಕಾಸ್ವಾಮಿಗೆ ಶಿಕ್ಷೆ ಕೊಡಿಸೊ ಬದಲು ಯಾರೋ ಜೀವ ತೆಗೆದಿದ್ದು ಅಕ್ಷಮ್ಯ ಅಪರಾಧ. ತಂದೆಯಾಗುವ ಮೊದಲೇ ಕಣ್ ಮುಚ್ಚಿದ ರೇಣುಕಾಸ್ವಾಮಿ ಮತ್ತೆ ಮಗುವಾಗಿ ಹೆಂಡತಿಯ ಹೊಟ್ಟೆಯಲ್ಲಿ ಹುಟ್ಟಲಿ ಅನ್ನೋದೇ ನಮ್ಮ ಹಾರೈಕೆ. ಕ್ಷಮಿಸಿ ಎಂದು ನಟಿ ಬರೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ದರ್ಶನ್ ಕುಟುಂಬಕ್ಕೆ ಶಾಪ ಹಾಕಿದರೆ ಪ್ರಯೋಜನವೇನು. ನನ್ನ ತಂದೆ ಒಬ್ಬ ದೊಡ್ಡ ಸ್ಟಾರ್ ಅನ್ನೋದು ಸಹ ಗೊತ್ತಿಲ್ಲದ ಆ ಹಾಲುಗಲ್ಲದ ಮುದ್ದು ಹುಡುಗ ವಿನೀಶ್ ನೋಡಿದರೆ ಸಂಕಟವಾಗದಿರುವುದೆ ಫಾದರ್ಸ್ ಡೇ ದಿನ ತಂದೆಯನ್ನು ನೆನೆದು ವಿನೀಶ್ ಹಾಕಿದ ಪೋಸ್ಟ್ಗೆ ಮನಕಲಕದೆ ಇರುವುದೇ ಜೊತೆಗೆ ದರ್ಶನ್ ಜೀವನಕ್ಕೆ 22 ವರ್ಷದಿಂದ ವಿಜಯವೂ ಆಗಿ ಲಕ್ಷ್ಮಿಯೂ ಆಗಿರುವ ವಿಜಯಲಕ್ಷ್ಮಿಯವರನ್ನು ತಪ್ಪಿತಸ್ಥರಂತೆ ಕಾಣೋದು ಸರಿಯೇ ಇಂತಹ ಸಂದರ್ಭದಲ್ಲಿ ಅವರಿಬ್ಬರಿಗೂ ಧೈರ್ಯ ಹೇಳಬೇಕೇ ಹೊರತು ಹೀಯಾಳಿಸುವುದು ಬೇಡ ಎಂದು ನಟಿ ಹೇಳಿದ್ದಾರೆ.ಇದನ್ನೂ ಓದಿ: ಪೋಕ್ಸೋ ಕೇಸ್ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

