ಬೆಂಗಳೂರು : ವಿಧಾನಸಭಾ ಸದನದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ಕುರಿತು ತೀವ್ರ ಚರ್ಚೆ ನಡೆಯಿತು. ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವ ಜಾರ್ಜ್, “ಯಾವುದೇ ರಾಜೀನಾಮೆ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಖಡಕ್ ಹೇಳಿಕೆ ನೀಡಿದ್ದಾರೆ.
ಸುನೀಲ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್, ರಾಜೀನಾಮೆ ಸಂಬಂಧಿತ ಸುದ್ದಿಗಳನ್ನು ತಳ್ಳಿ ಹಾಕಿದರು. ಬ್ರೇಕಿಂಗ್ ನ್ಯೂಸ್ ಬಗ್ಗೆ ಮಾತನಾಡಿದ ಅವರು, ಇದು ಸುಳ್ಳು ಹಾಗೂ ಊಹಾಪೋಹದ ಸುದ್ದಿ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲವಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಘೋಷಿಸಿದರು. ರಾಜಕೀಯವಾಗಿ ಸರ್ಕಾರ ಸ್ಥಿರವಾಗಿದೆ, ಯಾವುದೇ ಗೊಂದಲ ಇಲ್ಲ ಎಂದು ಅವರು ಸ್ಪಷ್ಟ ಸಂದೇಶ ನೀಡಿದರು.

