ಕಾರವಾರ: ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಜಯಗಳಿಸಿದ್ದಾರೆ. ಆದರೆ ಅಧಿಕೃತವಾಗಿ ಇನ್ನಷ್ಟೇ ಘೋಷಣೆ ಮಾಡಬೇಕಿದೆ.
ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳಿಂದ ಜಯಗಳಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಗೇರಿಯವರು ಮುನ್ನಡೆ ಕಾಯ್ದುಕೊಂಡಿದ್ದರು. ದೀಗ ನಿಂಬಾಳ್ಕರ್ (Anjali Nimbalkar) ವಿರುದ್ಧ ಕಾಗೇರಿಯವರು ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಜಯದ ಮಾಲೆ
ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದುಕೊಳ್ಳುವ ಮೂಲಕ ಸೋಲನುಭವಿಸಿದರು. ಒಟ್ಟಿನಲ್ಲಿ ಕಾಗೇರಿಯವರು 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದಾರೆ. 10,139 ನೋಟಾ ಮತಗಳು ದಾಖಲಾಗಿವೆ. ಇದನ್ನೂ ಓದಿ: Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು
ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಕಾರ್ಯಕರ್ತರಲ್ಲಿ ಸಂತಸ ಮನೆಮಾಡಿದೆ. ಕುಮಟಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾಗೇರಿಗೆ ಅವರಿಗೆ ವಿಶ್ವೇಶ್ವರ ಹೆಗಡೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನೂ ಅವರ ಕಾರುಯಕರ್ತರು ಮತ್ತು ಅಭಿಮಾನಿಗಳು, ಮುಂಖಡರು ಘೋಷಣೆಗಳನ್ನು ಕೂಗುವ ಮೂಲಕ ಗೆಲುವನ್ನ ಸಂಭ್ರಮಿಸಿದರು.ಇದನ್ನೂ ಓದಿ: ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್.ಡಿ ಕುಮಾರಸ್ವಾಮಿ
ತಮ್ಮ ಗೆಲುವಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೇರಿಯವರು, ನನ್ನ ಗೆಲುವನ್ನು ಕಾರ್ಯಕರ್ತರು ಮತದಾರಿಗೆ ಅರ್ಪಣೆ ಮಾಡುತ್ತೇನೆ. ನನ್ನ ಸೋಲಿಸಬೇಕು ಎಂದು ಪ್ರಯತ್ನಿಸಿದ ವ್ಯಕ್ತಿಗಳು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಜಿಲ್ಲೆಯ ಕಾರ್ಯಕರ್ತರು ತೋರಿಸಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಶಿವರಾಮ್ ಹೆಬ್ಬಾರ್ ಗೆ ಟಾಂಗ್ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ

