ಬೆಂಗಳೂರು : ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಗಳಿಗೆ ಕನ್ನಡಿಗರು ಮತ್ತು ಕನ್ನಡ ಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ನಟ ಕಮಲ್ ಹಾಸನ್ ತಮ್ಮ ಮುಂಬರುವ ಚಿತ್ರ ‘ಥಗ್ ಲೈಫ್’ ಬಿಡುಗಡೆ ಮತ್ತು ಪ್ರದರ್ಶನವನ್ನು ಬಿಡುಗಡೆಗೆ ತಡೆ ನೀಡದಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂದು ಹೇಳಿದ್ದಕ್ಕಾಗಿ ಕರ್ನಾಟಕದಲ್ಲಿ ಕಮಲ್ ಹಾಸನ್ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ. ಈ ಹೇಳಿಕೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಜೂನ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಥಗ್ ಲೈಫ್ ಬಿಡುಗಡೆಯನ್ನು ಸ್ಥಗಿತಗೊಳಿಸಬೇಕೆಂಬ ಒತ್ತಾಯದ ನಡುವೆ, ರಾಜ್ಯದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕಾನೂನು ಹಸ್ತಕ್ಷೇಪವನ್ನು ಕಮಲ್ ಹಾಸನ್ ಕೋರಿದ್ದಾರೆ.
ತಮ್ಮ ನಿರ್ಮಾಣ ಕಂಪನಿ ರಾಜ್ ಕಮಲ್ ಫಿಲ್ಮ್ಸ್ ಇಂಟನ್ರ್ಯಾಷನಲ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ಕಮಲ್ ಹಾಸನ್, ಕರ್ನಾಟಕ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಚಲನಚಿತ್ರ ವ್ಯಾಪಾರ ಸಂಸ್ಥೆಗಳು ಚಿತ್ರ ಬಿಡುಗಡೆಗೆ ಅಡ್ಡಿಯಾಗದಂತೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದಾರೆ. ಪ್ರದರ್ಶನಕ್ಕೆ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ಸೂಚನೆಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಕನ್ನಡ ಪರ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‍ಸಿಸಿ) ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯನ್ನು ನಿಷೇಧಿಸಿದೆ.
ಕನ್ನಡ ಭಾಷೆಯ ಬಗ್ಗೆ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆಯಾಗಿ ು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಚೆನ್ನೈನಲ್ಲಿ ನಡೆದ ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕಮಲ್ ಹಾಸನ್, “ಕನ್ನಡ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು, ಈ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.ಕ್ಷಮೆ ಕೇಳಬೇಕು ಎಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿವೆ.
ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದ್ದು, ಕ್ಷಮೆಯಾಚನೆಗೆ ಕನ್ನಡಿಗರು ಪಟ್ಟು ಹಿಡಿದಿದ್ದಾರೆ. ಈ ನಡು?ವಲ್ಲೇ ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ನಟ ಕಮಲ್ ಹಾಸನ್ ಅವರು ಪುನರುಚ್ಛರಿಸಿದ್ದರು.
ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ಕುತಂತ್ರ ಹೊಂದಿರುವವರನ್ನು ಹೊರತುಪಡಿಸಿ ಯಾರೂ ಈ ಪ್ರೀತಿಯನ್ನು ಅನುಮಾನಿಸುವುದಿಲ್ಲ. ನನಗೆ ಈ ಹಿಂದೆಯೂ ಬೆದರಿಕೆ ಹಾಕಲಾಗಿತ್ತು. ನನ್ನಿಂದ ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ, ತಪ್ಪಿಲ್ಲ ಎಂದಾಗ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದರು.
ಸಿನಿಮಾ ತಾರೆಯರು, ಸಾಹಿತಿಗಳು, ರಾಜಕೀಯ ಮುಖಂಡರು ಸೇರಿದಂತೆ ಕಮಲ್ ಹಾಸನ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಿಗರಿಗೆ ಕಮಲ್ ಹಾಸನ್ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ. ಆದರೆ, ಕಮಲ್ ಹಾಸನ್ ಮಾತ್ರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿದ್ದಾರೆ.
24 ಗಂಟೆ ಅವಧಿ :
ಈ ಮಧ್ಯೆ ಕರ್ನಾಟಕ ಫಿಲ್ಮ್ ಚೇಂಬರ್?ನಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಎಲ್ಲರ ಅಭಿಪ್ರಾಯ ಕೇಳಲಾಗಿದೆ. ಅಲ್ಲದೆ, `ಥಗ್ ಲೈಫ್’ ಚಿತ್ರದ ಕರ್ನಾಟಕದ ವಿತರಕ ವೆಂಕಟೇಶ್ ಅವರ ಕೋರಿಕೆ ಮೇರೆಗೆ ಕಮಲ್?ಗೆ ಮತ್ತೆ 24 ಗಂಟೆಗಳ ಕಾಲವಕಾಶ ಕೊಟ್ಟಿದೆ. ಈ ಬಗ್ಗೆ ಕಮಲ್ ಹಾಸನ್ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಕಮಲ್ ಹಾಸನ್ ಅವರು ಕನ್ನಡದ ವಿಚಾರಕ್ಕೆ ಕ್ಷಮೆ ಕೇಳಿಲ್ಲ. ಈಗ ಅವರಿಗೆ ಮತ್ತೆ 24 ಗಂಟೆ ಸಮಯ Éೂಡಲಾಗಿದೆ. ಈ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಮಾಹಿತಿ ನೀಡಿದ್ದಾರೆ. `ಕಮಲ್ ಹಾಸನ್ ಕ್ಷಮೆ ಕೇಳುವುದಿಲ್ಲ ಎಂದು ಅನಿಸುತ್ತಿದೆ. ಎಲ್ಲರ ಜೊತೆ ಚರ್ಚೆ ಮಾಡುತ್ತೇವೆ. ಎಲ್ಲರ ಅನಿಸಿಕೆ ಏನಿದೆ ಎಂಬುದನ್ನು ನೋಡುತ್ತೇವೆ. ಕಮಲ್ ಹಾಸನ್ ಸದ್ಯ ದುಬೈನಲ್ಲಿದ್ದಾರೆ. . ಮಂಗಳವಾರ ಮಧ್ಯಾಹ್ನ 12 ಗಂಟೆ ತನಕ ಟೈಂ ಕೊಡಿ ಅಂತ ವಿತರಕರು ಕೆಳಿದ್ದಾರೆ’ ಎಂದಿದ್ದಾರೆ .
`ಥಗ್ ಲೈಫ್’ ಚೆನ್ನೈ ಈವೆಂಟ್ ನಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು, ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ವಿಚಾರ ಅಷ್ಟು ಗಂಭೀರವಾಗಿರಲ್ಲಿ. ಆ ಬಳಿಕ ಈ ಕ್ಲಿಪ್ ವೈರಲ್ ಆಗಿ ಇದರ ಬಗ್ಗೆ ಚರ್ಚೆ ಹುಟ್ಟುವಂತೆ ಮಾಡಲಾಯಿತು. ಕಮಲ್ ಹಾಸನ್ ಕ್ಷಮೆ ಕೇಳುವಂತೆ ಒತ್ತಾಯ ಹೇರಲಾಯಿತು. ಆದರೆ, ಕಮಲ್ ಹಾಸನ್ ಅವರು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎನ್ನುವ ನಿರ್ಧಾರ ಮಾಡಿಯಾಗಿದೆ.
ಸದ್ಯ ಕರ್ನಾಟಕ ಫಿಲ್ಮ್ ಚೇಂಬರ್ ಅವರು ಕಮಲ್ ಹಾಸನ್?ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಸಿನಿಮಾ ಬಿಡುಗಡೆ ಆಗಬೇಕು ಎಂದರೆ ಕ್ಷಮಾಪಣೆ ಕೇಳೋದು ಕಡ್ಡಾಯ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ಅವರು ಸೊಪ್ಪು ಹಾಕುತ್ತಿಲ್ಲ. ಈಗ 24 ಗಂಟೆ ಹೆಚ್ಚುವರಿಯಾಗಿ ನೀಡಲಾಗಿದೆ.

