ವಾಷಿಂಗ್ಟನ್ : ನವೆಂಬರ್ 5 ರಂದು ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಹಿಂದೆ ಸರಿದ ನಂತರ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಚುನಾವಣಾ ಕಣದಿಂದ ಹಿಂದೆ ಸರಿದಿರುವ ಅಧ್ಯಕ್ಷ ಜೋ ಬೈಡನ್, ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ್ದಾರೆ. ಜೋ ಬೈಡನ್ ಅವರ ಅನುಮೋದನೆ ಪಡೆದಿರುವುದು ಗೌರವದ ವಿಚಾರ. ಈ ಚುನಾವಣೆಯನ್ನು ಗೆಲ್ಲುವುದು ನನ್ನ ಗುರಿ ಎಂದು ಅವರು ಹೇಳಿದ್ದಾರೆ.
ಅಮೇರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಅ ವರು ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಅಧಿಕೃತವಾಗಿ ತಮ್ಮ ಉಮೇದುವಾರಿಕೆಯನ್ನು ಘೋಷಿಸುವ ಕಡತಗಳಿಗೆ ಸಹಿ ಹಾಕಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಡತಗಳಿಗೆ ಸಹಿ ಹಾಕುತ್ತಿರುವ ಫೋಟೊ ಪೋಸ್ಟ್ ಮಾಡಿದ ಕಮಲಾ ಹ್ಯಾರಿಸ್, “ಇಂದು, ನಾನು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸುವ ಫಾರ್ಮ್‌ಗಳಿಗೆ ಸಹಿ ಮಾಡಿದ್ದೇನೆ. ಪ್ರತಿ ಮತವನ್ನು ಗಳಿಸಲು ನಾನು ಶ್ರಮಿಸುತ್ತೇನೆ. ಜನಪರವಾದ ನಮ್ಮ ಅಭಿಯಾನಕ್ಕೆ ನವೆಂಬರ್ನಲ್ಲಿ ಗೆಲುವು ಆಗಲಿದೆ ಎಂದು ಹೇಳಿದ್ದಾರೆ.
ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಥಮ ಮಹಿಳೆ ಮಿಷೆಲ್ ಒಬಾಮಾ ಅವರು ಕಮಲಾ ಹ್ಯಾರಿಸ್ಗೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ. ಕಮಲಾ ಅವರು ಅಧ್ಯಕ್ಷರಾಗಿ ಚುನಾಯಿತರಾದರೆ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೇರಿದ ಮೊದಲ ಕಪ್ಪುವರ್ಣೀಯ ಮಹಿಳೆ ಎಣಿಸಿಕೊಳ್ಳಲಿದ್ದಾರೆ.

