ಬೆಂಗಳೂರು : ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು.
ಹಲ್ಲೆ ನಡೆಸಲು ನಾಗೇಂದ್ರಗೆ ಧ್ರುವ ಮ್ಯಾನೇಜರ್ ಅಶ್ವಿನ್ ಸಾಥ್ ಕೊಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪ್ರಶಾಂತ್ ಪೂಜಾರಿ ಅವರು ನಟ ಧ್ರುವ ಸರ್ಜಾಗೆ ಜಿಮ್‌ನಲ್ಲಿ ತರಬೇತಿ ನೀಡುತ್ತಿದ್ದು, ಇವರಿಬ್ಬರು ಆಪ್ತರಾಗಿದ್ದರು. ಆದರೆ ಇವರಿಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಸಾದ್ಯವಾಗದೇ ಹಲ್ಲೆಗೆ ಪ್ಲ್ಯಾನ್ ರೂಪಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಅಶ್ವಿನ್ ನನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಏನಿದು ಕೇಸ್?
ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ, ಮೇ 26 ರಂದು ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ ಎಂಬುದು ತಿಳಿದುಬಂದಿತ್ತು. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬ ಆರೋಪ ಕೇಳಿ ಬಂದಿದೆ.
ಈ ಹಿಂದೆ ಧ್ರುವ ಸರ್ಜಾ ಅಶ್ವಿನ್ ಹುಟ್ಟು ಹಬ್ಬಕ್ಕೆ ದುಬಾರಿ ಫಾರ್ಚ್ಯೂನರ್ ಕಾರು ಗಿಫ್ಟ್ ಮಾಡಿದ್ದರು. ಧ್ರುವ ಸರ್ಜಾಗೆ ಅತ್ಯಾಪ್ತನಾಗಿಯೂ ಇದ್ದ ಅಶ್ವಿನ್. ಇನ್ನು ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಹಾಗೂ ಧ್ರುವ ಸರ್ಜಾ ಅಭಿಮಾನಿಗಳು ವಾರ್ ಆರಂಭವಾಗಿದೆ. ಇತ್ತೀಚೆಗೆ ಧ್ರುವ ಸರ್ಜಾ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದ ತುಣುಕುಗಳನ್ನು ಇಟ್ಟುಕೊಂಡು ನಟನ ಮಾತುಗಳನ್ನು ಟ್ರೋಲ್ ಮಾಡಲಾಗಿದೆ.

