ಬೆಂಗಳೂರು : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ನಿನ್ನೆ (ಜ.26)ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು. ಪೋಷಕರಾಗಿ ಪ್ರಮೋಷನ್ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವದ ದಿನವೇ ತಮ್ಮ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ.
ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರಿಪ್ರಿಯ ಗಂಡು ಮಗುವಿಗೆ ಜನ್ಮ ನೀಡಿದ್ದು. ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ನಟ ವಸಿಷ್ಟ ಸಿಂಹ ಭಾವುಕರಾಗದ್ದಾರೆ.
ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಜೋಡಿ ಎಲ್ಲಿಯೂ ತಮ್ಮ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಮದುವೆಗೆ ಇನ್ನೇನು ಕೆಲ ದಿನಗಳು ಇದೆ ಎಂದಾಗ ತಮ್ಮ ಪ್ರೇಮ ಪುರಾಣವನ್ನು ಅಭಿಮಾನಿಗಳೆದುರು ತೆರೆದಿಟ್ಟಿದ್ದರು. 2023ರ ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮೊದಲ ಮಗುವಿನ ಆಗಮನದಿಂದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರ ಕುಟುಂಬದಲ್ಲಿ ಸಂತಸ ಮೂಡಿದೆ. ನಟಿ ಹರಿಪ್ರಿಯಾ ತಾಯಿಯಾದ ವಿಚಾರವನ್ನು ವಸಿಷ್ಠ ಸಿಂಹ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ರಿವೀಲ್ ಮಾಡಿದ್ದಾರೆ. ತಮ್ಮ ಆನಿವರ್ಸರಿ ದಿನವೇ ಮಗ ಬಂದಿದ್ದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ. ನೆಟ್ಟಿಗರು, ಅಭಿಮಾನಿಗಳು, ಸಿನಿರಂಗದವರು ಅಭಿನಂದನೆ ತಿಳಿಸುತ್ತಿದ್ದಾರೆ.

