ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಎಂದೇ ಖ್ಯಾತಿ ಗಳಿಸಿರುವ ಕನ್ನಡ ಬಿಗ್ ಬಾಸ್ ಸೀಸನ್ 11 ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮದ ಮೂಲಕ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ೧೦ ಜನ ಸ್ವರ್ಗಕ್ಕೆ ಹೋದರೆ ಏಳು ಜನ ನರಕ ಸೇರಿದ್ದಾರೆ.
ಈ ಬಾರಿಯ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ವರ್ಗ ಮತ್ತು ನರಕ ಕಾನ್ಸೆಪ್ಟ್ ವೀಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಮನೆ ಹೇಗಿರಲಿದೆ? ಯಾರು ಯಾವ ಜಾಗಕ್ಕೆ ಸೇರುತ್ತಾರೆ ಎಂಬ ಪ್ರಶ್ನೆ ಬೆಂಬಿಡದೆ ಕಾಡುತ್ತಿತ್ತು. ಆದ್ರೆ, ಈ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ. ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮಕ್ಕೂ ಮುನ್ನವೇ ಇವರು ಬರುತ್ತಾರೆ, ಅವರ ಎಂಟ್ತಿ ಇರುವುದು ಪಕ್ಕಾ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿತ್ತಿತ್ತು. ಅಸಲಿಗೆ ಬಿಗ್ ಮನೆಯೊಳಗೆ ಯಾರೆಲ್ಲಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ ಎಂಬುದರ ಸಂಪೂರ್ಣ ವಿವರ ಹೀಗಿದೆ ಗಮನಿಸಿ.
ಸತತ 11 ಸೀಸನ್ಗಳನ್ನು ತಮ್ಮ ಖಡಕ್ ಮಾತು, ವಿಭಿನ್ನ ಶೈಲಿಯಿಂದಲೇ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ , ಒಂದಷ್ಟು ಗೊಂದಲಗಳ ನಡುವೆ ಅಂತಿಮವಾಗಿ ಈ ಬಾರಿಯೂ ಅವರೇ ಕಾರ್ಯಕ್ರಮದ ನಡೆಸಿಕೊಡುತ್ತಿದ್ದಾರೆ.
ಬಿಗ್ ಬಾಸ್ ಮನೆ ಸೇರಿದ ಸ್ಪರ್ಧಿಗಳು :
ಧನರಾಜ್ ಆಚಾರ್, ಗೌತಮಿ ಜಾಧವ್, ಲಾಯರ್ ಜಗದೀಶ್, ತ್ರಿವಿಕ್ರಮ್, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್, ಐಶ್ವರ್ಯಾ ಶಿಂಧೋಗಿ, ಅನುಷಾ ರೈ, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಮಾನಸಾ ಸಂತೋಷ್, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ಉಗ್ರಂ ಮಂಜು
ಸ್ವರ್ಗ ಸೇರಿದವರು :
ಧನರಾಜ್ ಆಚಾರ್, ಗೌತಮಿ ಜಾಧವ್, ಲಾಯರ್ ಜಗದೀಶ್, ತ್ರಿವಿಕ್ರಮ್, ಯಮುನಾ ಶ್ರೀನಿಧಿ, ಭವ್ಯಾ, ಹಂಸಾ ಪ್ರತಾಪ್, ಐಶ್ವರ್ಯಾ ಶಿಂಧೋಗಿ ಮತ್ತು ಉಗ್ರಂ ಮಂಜು.
ನರಕ ಸೇರಿದವರು :
ಅನುಷಾ ರೈ, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಮಾನಸಾ ಸಂತೋಷ್, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಮತ್ತು ರಂಜಿತ್.