By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ, ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ, ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ

ರಾಜ್ಯ-KarnatakaLatest

ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ, ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ

Kannadigas killed in Canada, brutally shot dead

Published February 9, 2026
Share
2 Min Read
Chandan Kumar Chandan Kumar Chandan Kumar
SHARE

ನೆಲಮಂಗಲ, ಫೆಬ್ರವರಿ 9:ಕೆನಡಾದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ನೆಲಮಂಗಲ ತಾಲೂಕಿನ ಕನ್ನಡಿಗನೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಕರ್ನಾಟಕದಲ್ಲಿರುವ ಕುಟುಂಬಸ್ಥರನ್ನು ಆಳವಾದ ಶೋಕದಲ್ಲಿ ಮುಳುಗಿಸಿದೆ.

ಮೃತರನ್ನು ಚಂದನ್ ಕುಮಾರ್ (37) ಎಂದು ಗುರುತಿಸಲಾಗಿದ್ದು, ಅವರು ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರು. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ವಾಸವಾಗಿದ್ದ ಚಂದನ್ ಕುಮಾರ್, ಎಲ್ ಅಂಡ್ ಟಿ (L&T) ಕಂಪನಿಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಗುಂಡಿನ ದಾಳಿ ನಡೆದದ್ದು ಹೇಗೆ?
ಸ್ಥಳೀಯರ ಮಾಹಿತಿಯ ಪ್ರಕಾರ, ಫೆಬ್ರವರಿ 8ರಂದು ಕೆನಡಾದ ವುಡ್‌ಬೈನ್ ಮಾಲ್ ಸಮೀಪ ಚಂದನ್ ಕುಮಾರ್ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಸ್ಥಳೀಯರು ಹೇಳುವಂತೆ, ಮಾಲ್ ಹೊರಭಾಗದಲ್ಲಿ ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಹಲವು ಬಾರಿ ಗುಂಡಿನ ಶಬ್ದ ಕೇಳಿಬಂದಿದ್ದು, ಕಾರಿನ ಗಾಜಿನ ಮೂಲಕ ನೋಡಿದಾಗ ಗನ್ ಹಿಡಿದ ವ್ಯಕ್ತಿಯೊಬ್ಬ ನಿಂತಿರುವುದು ಕಂಡಿತು ಎಂದು ತಿಳಿಸಿದ್ದಾರೆ.

ಕುಟುಂಬದ ಹಿನ್ನೆಲೆ
ಚಂದನ್ ಕುಮಾರ್ ಅವರ ತಂದೆ ನಂದಕುಮಾರ್ ನಿವೃತ್ತ ಶಿಕ್ಷಕರಾಗಿದ್ದು, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ. ಘಟನೆ ಬಗ್ಗೆ ಕೆನಡಾ ಪೊಲೀಸರು ಕುಟುಂಬಕ್ಕೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಕುಟುಂಬಸ್ಥರ ಪ್ರಕಾರ, ಚಂದನ್ ಕುಮಾರ್ ಅವರು ಕೆಲಸದ ಜೊತೆಗೆ ವಿದೇಶದಲ್ಲಿರುವ ಕನ್ನಡಿಗರಿಗೆ ನೆರವು ನೀಡುವ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು–ಬೆಳವಣಿಗೆಯ ಉದ್ದೇಶದಿಂದ ವಿವಿಧ ಸಂಘಟನೆಗಳ ಮೂಲಕ ಸೇವೆ ಸಲ್ಲಿಸುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಕೆ. ಸುಧಾಕರ್ ಸಂತಾಪ :
ಈ ಕುರಿತು ಮಾಜಿ ಸಚಿವ ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, “ಕೆನಡಾದ ಟೊರಾಂಟೋ ನಗರದಲ್ಲಿ ಐಟಿ ಉದ್ಯೋಗಿಯಾಗಿ ನೆಲೆಸಿದ್ದ ನಮ್ಮ ಕರ್ನಾಟಕ ಮೂಲದ, ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಅವರು ಶನಿವಾರ ನಡೆದ ಶೂಟೌಟ್‌ನಲ್ಲಿ ಹತ್ಯೆಗೀಡಾಗಿರುವುದು ಅತ್ಯಂತ ಆಘಾತಕಾರಿ ಮತ್ತು ದುಃಖಕರ ಸಂಗತಿ” ಎಂದು ಹೇಳಿದ್ದಾರೆ.

“ಮೃತ ಚಂದನ್ ಕುಮಾರ್ ಅವರ ತಂದೆ–ತಾಯಿ ಹಾಗೂ ಕುಟುಂಬ ಸದಸ್ಯರಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಕೇಂದ್ರ ವಿದೇಶಾಂಗ ಸಚಿವಾಲಯದ ಸಹಕಾರದೊಂದಿಗೆ ಮೃತದೇಹವನ್ನು ಆದಷ್ಟು ಶೀಘ್ರ ಭಾರತಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅವರ ಕುಟುಂಬದ ದುಃಖದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಭಾಗಿಯಾಗಿದ್ದಾನೆ” ಎಂದು ಬರೆದುಕೊಂಡಿದ್ದಾರೆ.

You Might Also Like

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಚಾಲನೆ ನೀಡಲಿದ್ದಾರೆ ಸಿಎಂ : ಡಿಕೆಶಿ

ಮನೆಯೂಟಕ್ಕೆ ನಟ ದರ್ಶನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

ಸುಹಾಸ್ ಶೆಟ್ಟಿ ಕೊಲೆ ಹಿಂದೆ ರಾಜಕೀಯ ಪಿತೂರಿ

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

TAGGED:Chandan Kumar
Share This Article
Facebook Copy Link Print
Previous Article sgadgdg sgadgdg sgadgdg ಕೆಎಸ್‌ಆರ್‌ಟಿಸಿ ಬಸ್‌ನ ಜಾಯಿಂಟ್ ರಾಡ್ ಏಕಾಏಕಿ ಕಟ್, ಬೀದರ್‌ನಲ್ಲಿ ತಪ್ಪಿದ ಭಾರಿ ದುರಂತ
Next Article vidhana soudha vidhana soudha vidhana soudha ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up