ಬೆಂಗಳೂರು: ಬಹುನಿರೀಕ್ಷಿತ ಕಾಂತರ ಚಾಪ್ಟರ್ -1 ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಈ ಸಿನಿಮಾದ ಸೆಟ್ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನಿಧನರಾಗಿದ್ದಾರೆ.ಮೃತ ದುರ್ದೈವಿಯನ್ನು ಕಪಿಲ್ ಎಂದು ಗುರುತಿಸಲಾಗಿದ್ದು ಇವರನ್ನು ಕೇರಳ ಮೂಲದವರು ಎಂದು ಹೇಳಲಾಗಿದೆ. ಶೂಟಿಂಗ್ ಮುಗಿಸಿದ ಬಳಿಕ ಕಪಿಲ್ ಎನ್ನುವ ಜೂನಿ ಯರ್ ಆರ್ಟಿಸ್ಟ್ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ.
ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಕಾಂತಾರ ಚಾಪ್ಟರ್ -1 ಶೂಟಿಂಗ್ ಸಮಯದಲ್ಲಿ ಜೂನಿಯರ್ ಕಲಾವಿದನೊಬ್ಬ ಸಾವಿ ಗೀಡಾಗಿದ್ದಾರೆ. ರಿಷಬ್ ಶೆಟ್ಟಿ ಸಿನಿಮಾ ತಯಾರಿ ಹಂತದಲ್ಲೇ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದ್ದು, ದೈವ ನುಡಿದ ಮಾತು ನಿಜವಾಗುತ್ತಿದೆಯೇ ಎಂಬ ಅನುಮಾನ ಕೂಡ ಇದೀಗ ಉಂಟು ಮಾಡಿದೆ.
ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ ಈಗಾಗಲೇ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಸುಮಾರು 16 ಕೋಟಿ ರೂಪಾಯಿ ಬಜೆಟ್ ಸಿನಿಮಾ ಬರೋಬ್ಬರಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿತ್ತು. ಇದೀಗ ಈ ಸಿನಿಮಾದ ಮೊದಲ ಭಾಗ ನಿರ್ಮಾಣಗೊಳ್ಳುತ್ತಿದೆ. ಈ ಚಿತ್ರದ ಬಿಡುಗಡೆಗಾಗಿ ಸಿನಿ ಪ್ರಿಯರು ಕಾತುರ ರಾಗಿದ್ದು ಈ ನಡುವೆ ಸಿನಿಮಾ ತಂಡಕ್ಕೆ ವಿಘ್ನ ಎದುರಾ ದಂತೆ ಆಗಿದೆ.

