ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಸೇತುವೆ ನಿರ್ವಹಣೆ ಲೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎ) ಹಾಗೂ ಐಆರ್‌ಬಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೋಡಿಭಾಗ್ ಸೇತುವೆಯಿಂದ ಲಾರಿ ಸಮೇತ ಕಾಳಿ ನದಿಗೆ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾದ ತಮಿಳುನಾಡಿನ ಚಾಲಕ ಬಾಲ ಮುರುಗನ್ ರಾತ್ರಿ ಸಂಭವಿಸಿದ ಭಯಾನಕ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಶಾಕ್ ಆಗಿರುವುದಾಗಿಯೂ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ದಿ ಮಾಡುವಾಗ ಒಂದು ಮಾರ್ಗದಲ್ಲಿ ಮಾತ್ರ ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು.ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತತ್ತು ಈಗ ಅದು ಕುಸಿದಿದೆ.
ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ.