By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: LIVE : ರಾಜ್ಯ ಬಜೆಟ್ 2026-27 ನೇರಪ್ರಸಾರ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > LIVE : ರಾಜ್ಯ ಬಜೆಟ್ 2026-27 ನೇರಪ್ರಸಾರ
ರಾಜ್ಯ-KarnatakaLatest

LIVE : ರಾಜ್ಯ ಬಜೆಟ್ 2026-27 ನೇರಪ್ರಸಾರ

Karnataka Budget 20226 Live Updates

Published March 6, 2026
Share
5 Min Read
Siddaramaiah Budget Siddaramaiah Budget Siddaramaiah Budget
SHARE

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ 17ನೇ ದಾಖಲೆಯ ಬಜೆಟ್‌ ಆಗಿದ್ದು ಈ ಮೂಲಕ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ಬಜೆಟ್ ಹೈಲೈಟ್ಸ್ :

ಈ ಬಾರಿಯ ಕರ್ನಾಟಕ ಬಜೆಟ್ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ.
ಆದಾಯದ ಮೂಲ ಅಂದಾಜು ಮೊತ್ತ (ಕೋಟಿ ರೂ.ಗಳಲ್ಲಿ)
ವಾಣಿಜ್ಯ ತೆರಿಗೆ 1,25,000 ಕೋಟಿ
ರಾಜ್ಯ ಅಬಕಾರಿ 45,000 ಕೋಟಿ
ನೋಂದಣಿ ಮತ್ತು ಮುದ್ರಾಂಕ 29,000 ಕೋಟಿ ಮೋಟಾರು
ವಾಹನ ತೆರಿಗೆ 15,500 ಕೋಟಿ
ಇತರೆ ಮೂಲಗಳು ₹5,500 ಕೋಟಿ



ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ನೀಡಲಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಈ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಜೀಂ ಪ್ರೇಮ್‌ಜೀ ಫೌಂಡೇಷನ್ ವತಿಯಿಂದ 2025-26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಯಡಿ ನೆರವು ನೀಡಲಾಗುತ್ತದೆ ಎಂದು ಹೇಳಿದರು.

ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ ಎಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸ್‌ಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ಶೈಕ್ಷಣಿಕ ಹಾಗೂ ಸಾಮಾಜಿಕ ದೌರ್ಜನ್ಯವನ್ನು ತಡೆಯಲು ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ನಡೆಸುವ ಉದ್ದೇಶವಿದೆ. ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ಎನ್‌ಸಿಸಿ ಚಟುವಟಿಕೆಗಳನ್ನು ಉತ್ತೇಜಿಸಲು ಮುಂದಿನ ಎರಡು ವರ್ಷಗಳಲ್ಲಿ 10 ಸಾವಿರ ಕೆಡೆಟ್‌ಗಳನ್ನು ಹೆಚ್ಚಿಸುವ ಸಂಕಲ್ಪ ಕೈಗೊಂಡಿದ್ದು, ಬಸವ ಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡಲಾಗುತ್ತದೆ ಎಂದು ಸಿಎಂ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಬಜೆಟ್‌ನಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿ

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಸಿಹಿ ಸುದ್ದಿ ನೀಡಿದ್ದಾರೆ. ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಿದ ಅವರು, ರಾಜ್ಯದ ವಿವಿಧ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಘೋಷಿಸಿದರು. ಇದರ ಜೊತೆಗೆ, ನೇಮಕಾತಿ ಪ್ರಕ್ರಿಯೆಗಳು ನ್ಯಾಯಾಲಯದ ಪ್ರಕರಣಗಳಿಂದ ವಿಳಂಬವಾಗಿದ್ದ ಹಿನ್ನೆಲೆ ಉದ್ಯೋಗ ನೇಮಕಾತಿಗಳ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆ ನೀಡಲಾಗುತ್ತದೆ ಎಂದು 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಇತ್ತೀಚೆಗೆ ವಿದ್ಯಾನಗರಿ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಮತ್ತು ನಿರುದ್ಯೋಗಿ ಯುವಕರು ಬೃಹತ್ ಪ್ರತಿಭಟನೆ ನಡೆಸಿ, ನೇಮಕಾತಿ ಪ್ರಕ್ರಿಯೆ ತಕ್ಷಣ ಆರಂಭಿಸಬೇಕು ಎಂದು ಆಗ್ರಹಿಸಿದ್ದರು. ಓದಿದ್ದರೂ ನೋಟಿಫಿಕೇಶನ್ ಹೊರಬರದೆ ವಯಸ್ಸು ಮೀರಿಬಿಡುತ್ತಿದೆ ಎಂದು ಯುವಕರು ಸರ್ಕಾರದ ಗಮನ ಸೆಳೆದಿದ್ದರು.

ಧಾರವಾಡದ ಯುವಕರ ಆಕ್ರೋಶ ಕೊನೆಗೂ ವಿಧಾನಸೌಧದ ಮೆಟ್ಟಿಲೇರಿದ್ದು, ಅವರ ಧ್ವನಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬೃಹತ್ ನೇಮಕಾತಿಗೆ ಹಸಿರು ನಿಶಾನೆ ತೋರಿದ್ದಾರೆ.

ಬೆಂಗಳೂರು, ಧಾರವಾಡ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪಿಜಿ ಪೂರ್ಣಗೊಳಿಸಿ, ಕೋಚಿಂಗ್‌ಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡಿ ಹಗಲಿರುಳು ಓದುತ್ತಿರುವ ಲಕ್ಷಾಂತರ ಯುವಕರಿಗೆ ಈ ಘೋಷಣೆ ದೊಡ್ಡ ಉತ್ತೇಜನ ನೀಡಿದೆ.

ಸದ್ಯ ಬಜೆಟ್‌ನಲ್ಲಿ ಒಟ್ಟು 56 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದ್ದರೂ, ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆಗಳು ಎಂಬ ವಿವರ ಇನ್ನೂ ಅಧಿಕೃತವಾಗಿ ಪ್ರಕಟವಾಗಬೇಕಿದೆ. ಆದರೆ ಮೂಲಗಳ ಪ್ರಕಾರ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ (ಶಿಕ್ಷಕರ ನೇಮಕಾತಿ), ಆರೋಗ್ಯ, ಕಂದಾಯ ಸೇರಿದಂತೆ ಹಲವು ಇಲಾಖೆಗಳಲ್ಲಿ ದೊಡ್ಡ ಮಟ್ಟದ ನೇಮಕಾತಿ ನಡೆಯುವ ಸಾಧ್ಯತೆ ಇದೆ.

ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ

ಮಹಿಳಾ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್‌ಗಳಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯೋಜನೆಯ ಅನುಷ್ಠಾನಕ್ಕಾಗಿ 5,300 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಅವರು ಘೋಷಿಸಿದರು.

ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ವೇಳೆ ಮಾತನಾಡಿದ ಅವರು, ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ 2021ರ ಜನವರಿ 1 ರಿಂದ 2023ರ ಫೆಬ್ರವರಿ 28ರವರೆಗೆ ಇರುವ ವೇತನ ಬಾಕಿಯನ್ನು ಪಾವತಿಸಲು, 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಲು ನಿರ್ಧರಿಸಲಾಗಿದೆ ಎಂದರು. ವೇತನ ಬಾಕಿ ಪಾವತಿಗಾಗಿ 1,271 ಕೋಟಿ ರೂ. ಮೀಸಲಿಡಲಾಗುವುದು ಎಂದು ತಿಳಿಸಿದರು.

4 ಸಾವಿರ ಎಲೆಕ್ಟ್ರಿಕ್‌ ಬಸ್ಸುಗಳ ಯೋಜನೆ

2026-27ನೇ ಸಾಲಿನಲ್ಲಿ ಸಾರಿಗೆ ನಿಗಮಗಳಿಗೆ 1,000 ಡೀಸೆಲ್ ಬಸ್ಸುಗಳನ್ನು ಒದಗಿಸಲಾಗುವುದು. ವಿಶ್ವಬ್ಯಾಂಕ್ ನೆರವಿನೊಂದಿಗೆ 2,000 ಕೋಟಿ ರೂ. ವೆಚ್ಚದ ಕರ್ನಾಟಕ ಎಲೆಕ್ಟ್ರಿಕ್ ಬಸ್ ಪ್ರೋಗ್ರಾಂ ಜಾರಿಗೆ ತರಲಾಗುತ್ತದೆ. ಇದರಡಿ ಬಿಎಂಟಿಸಿ 32 ಮತ್ತು ಇತರ ಸಾರಿಗೆ ನಿಗಮಗಳ 62 ಎಲೆಕ್ಟ್ರಿಕ್ ಬಸ್ ಡಿಪೋಗಳನ್ನು ಅಭಿವೃದ್ಧಿಪಡಿಸಿ, ಒಟ್ಟು 4,000 ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಅಪಘಾತ ನಿರ್ವಹಣೆಗೆ ಆಧುನಿಕ ತಂತ್ರಾಂಶ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಅಪಘಾತ ಸ್ಥಳಗಳನ್ನು ಗುರುತಿಸಿ ಪರಿಣಾಮಕಾರಿಯಾಗಿ ನಿರ್ವಹಿಸಲು, ಐಐಟಿ ಮದ್ರಾಸ್ ಮತ್ತು ಎನ್‌ಐಸಿ ಸಹಯೋಗದಲ್ಲಿ ಡ್ಯಾಶ್‌ಬೋರ್ಡ್ ಹೊಂದಿದ ಆಧುನಿಕ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ 5 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ಹೇಳಿದರು.

ಸಾರಿಗೆ ಮೂಲಸೌಕರ್ಯ ಅಭಿವೃದ್ಧಿ

ರಾಜ್ಯದಲ್ಲಿನ 25 ಪ್ರಾದೇಶಿಕ ಸಾರಿಗೆ ಕಚೇರಿಗಳ ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸಲು 10 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುವುದು.

ಇದಲ್ಲದೆ,
ತುಮಕೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ನಿರ್ಮಾಣ
ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ
ರಾಮದುರ್ಗ, ಹೊನ್ನಾಳಿ ಮತ್ತು ಗದಗದಲ್ಲಿ ನೂತನ ಬಸ್ ನಿಲ್ದಾಣಗಳ ನಿರ್ಮಾಣ
ತರೀಕೆರೆ ಬಸ್ ಡಿಪೋ ಅಭಿವೃದ್ಧಿ
ಮೂಲಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು.

You Might Also Like

ಮಂಡ್ಯಕ್ಕೆ ಮತ್ತೆ ಖುಲಾಯಿಸಿದ ಮಂತ್ರಿ ಲಕ್‌ – 25 ವರ್ಷದ ಬಳಿಕ ಕೇಂದ್ರದಲ್ಲಿ ಜೆಡಿಎಸ್‌ಗೆ ಮಂತ್ರಿ ಸ್ಥಾನ

ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ

ಗಣೇಶ ಹಬ್ಬ ಆಚರಣೆಗೆ ಬಿಬಿಎಂಪಿಯಿಂದ ಹೊಸ ರೂಲ್ಸ್‌, ಪಿಓಪಿ ಗಣೇಶ ಸಂಪೂರ್ಣ ನಿಷೇಧ

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ

ವಿಜಯೇಂದ್ರಗೆ ಓಪನ್ ಚಾಲೆಂಜ್ ಹಾಕಿದ ಯತ್ನಾಳ್

TAGGED:Budget 2026Karnataka BudgetSiddaramaiah Budget
Share This Article
Facebook Copy Link Print
Previous Article fsgfsgf fsgfsgf fsgfsgf ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
Next Article Siddaramaiah Budget 1 Siddaramaiah Budget 1 Siddaramaiah Budget 1 ಬಜೆಟ್‌ನಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaramaiah Budget 3 Siddaramaiah Budget 3 Siddaramaiah Budget 3
4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 6, 2026
fffff fffff fffff
ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ರಾಜ್ಯ-Karnataka
March 6, 2026
R Ashok
ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka
ರಾಜ್ಯ-Karnataka
March 6, 2026
Vijayendra
ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?
ರಾಜ್ಯ-Karnataka
March 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up