ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ (Kidnap) ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್ (High Court) ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ
ಭವಾನಿ ರೇವಣ್ಣಗೆ ಎಸ್ಐಟಿ (SIT) ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಪತ್ರದಂತೆ ಎಸ್ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದರು. ಆದರೆ, ಮನೆಯೊಳಗೆ ಹೋದ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಇದರಿಂದ ಎಸ್ಐಟಿ ಅಧಿಕಾರಿಗಳು ಸಂಜೆಯ ವರೆಗು ಕಾದು ನಿರಾಸೆಯಿಂದ ತೆರಳಿದ್ದಾರೆ.
15 ದಿನಗಳ ಹಿಂದೆಯೇ ಮನೆ ತೊರೆದಿರುವ ಭವಾನಿ ರೇವಣ್ಣ
ಹೊಳೆನರಸೀಪುರದಲ್ಲಿರುವ ಭವಾನಿ ರೇವಣ್ಣ ನಿವಾಸ ಖಾಲಿಯಾಗಿದೆ. ಬಂಧನದ ಭೀತಿಯಿಂದ ಭವಾನಿ 15 ದಿನಗಳ ಹಿಂದೆಯೇ ಮನೆ ತೊರೆದಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಕೆಲಸದವರು ಮಾತ್ರ ಇದ್ದಾರೆ. ಹೀಗಾಗಿ ಭವಾನಿ ಮೊಬೈಲ್ ಲೊಕೇಶನ್ ಮೇಲೆ ಎಸ್ಐಟಿ ಕಣ್ಣಿಟ್ಟಿದೆ. ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನ ಸಂಪರ್ಕಿಸಲು ಯತ್ನಿಸುತ್ತಿದೆ.

