By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ ಜಯಭೇರಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ ಜಯಭೇರಿ
BlogLatestTop Storiesರಾಜಕೀಯ | Politicsರಾಜ್ಯ-Karnataka

ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ ಜಯಭೇರಿ

Kishore Kumar Puttur Secures Victory for BJP in Karnataka Legislative Council Bye-Election

Published October 24, 2024
Share
2 Min Read
Kishore Kumar Puttur Secures Victory for BJP in Karnataka Legislative Council Bye-Election
SHARE

ಬೆಂಗಳೂರು : ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನಪರಿಷತ್‌ನ ಉಪ ಚುನಾವಣೆಯಲ್ಲಿ ಬಿಜೆಪಿ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್‌‍ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭವಾಯಿತು. ಮೊದಲು ಚುನಾವಣಾ ಅಧಿಕಾರಿಗಳು ಮತಗಳನ್ನು ಕ್ರೂಢೀಕರಿಸಿ ನಂತರ ಎಣಿಕೆಯನ್ನು ಪ್ರಾರಂಭಿಸಿದರು. ಮಧ್ಯಾಹ್ನ 12.30ಕ್ಕೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರು.

ಚಲಾವಣೆಯಾದ ಒಟ್ಟು 5906 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ರವರು 3,654 ಮತ ಪಡೆದು ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಅವರ ಎದುರಾಳಿ ಕಾಂಗ್ರೆಸ್‌‍ ಅಭ್ಯರ್ಥಿ ರಾಜು ಪೂಜಾರಿ 1957 ಮತ ಪಡೆದಿದ್ದಾರೆ. ಚಲಾವಣೆಯಾದ ಮತಗಳಲ್ಲಿ 87 ಮತಗಳು ತಿರಸ್ಕೃತಗೊಂಡಿದ್ದವು.

ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?

ಕಳೆದ ಸೋಮವಾರ ನಡೆದ ಉಪಚುನಾವಣೆಯಲ್ಲಿ ಶೇ 97.91ರಷ್ಟು ಮತದಾನವಾಗಿತ್ತು. ಈ ಉಪಚುನಾವಣೆಯಲ್ಲಿ ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ವಿಧಾನ ಸಭೆ, ವಿಧಾನ ಪರಿಷತ್‌ ಹಾಗೂ ಲೋಕಸಭಾ ಸದಸ್ಯರು ಸೇರಿ ಒಟ್ಟು 6,032 ಮತದಾರರಿದ್ದರು. ಅವರಲ್ಲಿ 5,906 ಮಂದಿ ತಮ ಹಕ್ಕನ್ನು ಚಲಾಯಿಸಿದ್ದರು.

ಕಣದಲ್ಲಿ ಎಸ್‌‍ಡಿಪಿಐನಿಂದ ಅನ್ವರ್‌ ಸಾಧತ್‌.ಎಸ್‌‍ , ಪಕ್ಷೇತರ ಅಭ್ಯರ್ಥಿ ದಿನಕರ್‌ ಉಲ್ಲಾಳ ಸ್ಪರ್ಧಿಸಿದ್ದರು. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 6,032 ಮತದಾರರು ಇದ್ದರು.

ದಕ್ಷಿಣ ಕನ್ನಡ ಜಿಲ್ಲೆಯ 223 ಗ್ರಾಮಪಂಚಾಯ್ತಿಗಳ 3363 ಸದಸ್ಯರು ಮಂಗಳೂರು ಮಹಾನಗರ ಪಾಲಿಕೆಯ 65, ಎರಡು ನಗರಸಭೆಗಳಲ್ಲಿನ 64 , ಮೂರು ಪುರಸಭೆಗಳಲ್ಲಿನ 74, ಐದು ನಗರಪಂಚಾಯ್ತಿ 86 ಮಂದಿ ಮತ ಚಲಾಯಿಸಿದ್ದರು. ಅದೇ ರೀತಿ ಉಡುಪಿ ಜಿಲ್ಲೆಯ 153 ಗ್ರಾಮಪಂಚಾಯ್ತಿಗಳಲ್ಲಿ 2355 ಸದಸ್ಯರು, ನಗರಸಭೆಯ 36, ಮೂರು ಪುರಸಭೆಯಲ್ಲಿನ 72, ಒಂದು ನಗರಪಂಚಾಯ್ತಿಯ 17 ಮಂದಿ ಮತ ಹಾಕಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ್‌‍ ಪೂಜಾರಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಕೋಟಾ ಶ್ರೀನಿವಾಸ್‌‍ ಪೂಜಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.

ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ :
ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಈ ಗೆಲುವು ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೆ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

You Might Also Like

ಬೆಂಗಳೂರಲ್ಲಿ ಭರ್ಜರಿ ಕಾರ್ಯಚರಣೆ – 18.28 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಸೀಜ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ

ಮಲಯಾಳಂ ಹಿರಿಯ ನಟಿ ಕವಿಯೂರ್ ಪೊನ್ನಮ್ಮ ಇನ್ನಿಲ್ಲ

TAGGED:Kishore Kumar PutturLegislative Council Bye-Election
Share This Article
Facebook Copy Link Print
Previous Article Priyanka Gandhi ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?
Next Article rail projects 6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up