By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ಜ್ಯೋತಿಷ್ಯ-Horoscope > ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ
BlogLatestMain PostTop Stories

ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ

Know these things before bringing Ganesha home

Published September 6, 2024
Share
5 Min Read
Know these things before bringing Ganesha home
SHARE

ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.

ಕುಟುಂಬದಲ್ಲಿ ಯಾರು ಆಚರಿಸಬೇಕು ?
ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತಿ ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ ಮೂರ್ತಿಯ ಪೂಜೆಯನ್ನು ಮಾಡಬೇಕು; ಆದರೆ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿಯು ಕಾರಣಾಂತರದಿಂದ ವಿಭಕ್ತವಾಗಿದ್ದರೆ ಪ್ರತಿಯೊಬ್ಬರೂ ಅವರವರ ಮನೆಗಳಲ್ಲಿ ಸ್ವತಂತ್ರವಾಗಿ ಗಣೇಶವ್ರತವನ್ನು ಆಚರಿಸಬೇಕು.

ಗಣೇಶಚತುರ್ಥಿಯ ಮಹತ್ವವೇನು ?
ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ೧೨೦ ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಈ ಸಮಯದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ಕಾಲಾವಧಿಯಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯ ವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.

ಗಣೇಶ ಚತುರ್ಥಿಯಂದು ನೂತನ ಶ್ರೀ ಗಣೇಶ ಮೂರ್ತಿಯನ್ನು ತರುವ ಹಿಂದಿನ ಉದ್ದೇಶವೇನು ?
ಮನೆಯಲ್ಲಿ ಪೂಜೆಗಾಗಿ ಗಣಪತಿಯನ್ನು ಇಟ್ಟಿರುವಾಗಲೂ ನೂತನ ಮೂರ್ತಿಯನ್ನು ತರುವ ಉದ್ದೇಶವು ಮುಂದಿನಂತಿದೆ. ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ನಿತ್ಯದ ಪೂಜೆಯಲ್ಲಿರುವ ಮೂರ್ತಿಯಲ್ಲಿ ಅವುಗಳ ಆವಾಹನೆ ಮಾಡಿದರೆ ಅದರಲ್ಲಿ ಬಹಳಷ್ಟು ಶಕ್ತಿ ಬರಬಹುದು. ಇಂತಹ ಹೆಚ್ಚು ಶಕ್ತಿ ಇರುವ ಮೂರ್ತಿಯ ಎಲ್ಲ ಬಗೆಯ ಪೂಜೆ-ಅರ್ಚನೆಗಳನ್ನು ವರ್ಷಪೂರ್ತಿ ಸರಿಯಾಗಿ ಮಾಡುವುದು ಕಠಿಣವಾಗಿರುತ್ತದೆ; ಏಕೆಂದರೆ ಅದಕ್ಕೆ ಕರ್ಮಕಾಂಡದ ಬಹಳಷ್ಟು ಬಂಧನಗಳನ್ನು ಪಾಲಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಗಣೇಶ ಲಹರಿಗಳನ್ನು ಆವಾಹನೆ ಮಾಡಲು ನೂತನ ಮೂರ್ತಿಯನ್ನು ಉಪಯೋಗಿಸಿ ನಂತರ ಅದನ್ನು ವಿಸರ್ಜನೆ ಮಾಡುತ್ತಾರೆ. ಗಣೇಶ ಲಹರಿಗಳಲ್ಲಿನ ಸತ್ತ್ವ, ರಜ ಮತ್ತು ತಮದ ಪ್ರಮಾಣವು 5:5:5 ಹೀಗಿದ್ದರೆ ಸರ್ವಸಾಧಾರಣ ವ್ಯಕ್ತಿಯಲ್ಲಿ ಅದರ ಪ್ರಮಾಣವು 1:3:5 ಹೀಗೆ ಇರುತ್ತದೆ; ಆದ್ದರಿಂದ ಸರ್ವಸಾಧಾರಣ ವ್ಯಕ್ತಿಯು ಗಣೇಶ ಲಹರಿಗಳನ್ನು ಹೆಚ್ಚು ಸಮಯದ ವರೆಗೆ ಗ್ರಹಣ ಮಾಡಲಾರನು.

ಶಾಸ್ತ್ರೋಕ್ತ ವಿಧಿ ಮತ್ತು ರೂಢಿ ಇವುಗಳ ಅವಧಿ
‘ಭಾದ್ರಪದ ಶುಕ್ಲ ಚತುರ್ಥಿಯ ದಿನ ಮಣ್ಣಿನ ಗಣಪತಿಯನ್ನು ತಯಾರಿಸಿ, ಅದನ್ನು ಎಡಗೈ ಮೇಲಿಟ್ಟು ಅಲ್ಲಿಯೇ ಸಿದ್ಧಿವಿನಾಯಕ ಹೆಸರಿನಿಂದ ಪ್ರಾಣಪ್ರತಿಷ್ಠೆ ಮತ್ತು ಪೂಜೆಯನ್ನು ಮಾಡಿ ಕೂಡಲೇ ವಿಸರ್ಜನೆ ಮಾಡಬೇಕು ಎಂಬ ಶಾಸ್ತ್ರವಿದೆ. ಆದರೆ ಮಾನವರು ಉತ್ಸವಪ್ರಿಯರಾಗಿರುವುದರಿಂದ ಇಷ್ಟರಿಂದಲೇ ಅವರಿಗೆ ಸಮಾಧಾನವಾಗಲಿಲ್ಲ. ಆದುದರಿಂದ ಒಂದೂವರೆ, ಐದು, ಏಳು ಅಥವಾ ಹತ್ತು ದಿನ ಗಣಪತಿಯ ಮೂರ್ತಿಯನ್ನು ಇಟ್ಟು ಉತ್ಸವ ಮಾಡತೊಡಗಿದರು. ಕೆಲವರು ಗಣಪತಿಯ ವಿಸರ್ಜನೆಯನ್ನು ಗೌರಿಯ ಜೊತೆಗೆ ಮಾಡುತ್ತಾರೆ. ಯಾರಾದರೊಬ್ಬರ ಕುಲದಲ್ಲಿ ಗಣಪತಿಯನ್ನು ಐದು ದಿನ ಇಡುವ ಪದ್ಧತಿ ಇದ್ದು ಅವರು ಅದನ್ನು ಒಂದೂವರೆ ಅಥವಾ ಏಳು ದಿನ ಇಡಬೇಕಾಗಿದ್ದರೆ ಅವರು ಹಾಗೆ ಮಾಡಬಹುದು. ಇದಕ್ಕೆ ಯಾವುದೇ ಅಧಿಕಾರಯುತ ವ್ಯಕ್ತಿಯನ್ನು ಕೇಳುವ ಆವಶ್ಯಕತೆಯಿಲ್ಲ. ತಮ್ಮ ತಮ್ಮ ರೂಢಿಗನುಸಾರ ಮೊದಲನೆಯ, ಎರಡನೆಯ, ಮೂರನೆಯ, ಆರನೆಯ, ಏಳನೆಯ ಅಥವಾ ಹತ್ತನೆಯ ದಿನ ಗಣೇಶಮೂರ್ತಿಯ ವಿಸರ್ಜನೆಯನ್ನು ಮಾಡಬೇಕು.

ಮೂರ್ತಿಯು ಭಗ್ನವಾದರೆ ಏನು ಮಾಡಬೇಕು?
ಮೂರ್ತಿಯ ಪ್ರಾಣಪ್ರತಿಷ್ಠೆಯನ್ನು ಮಾಡುವುದಕ್ಕಿಂತ ಮೊದಲು ಯಾವುದಾದರೊಂದು ಅವಯವಕ್ಕೆ ಏಟಾದರೆ ಅಥವಾ ಭಿನ್ನವಾದರೆ ಚಿಂತಿಸುವ ಕಾರಣವಿಲ್ಲ, ಅದರ ಬದಲು ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ವಿಸರ್ಜನೆಗಾಗಿ ಅಕ್ಷತೆ ಹಾಕಿದ ನಂತರ ಅವಯವಗಳಿಗೆ ಏಟಾದರೆ ಅಥವಾ ಭಿನ್ನವಾದರೆ ಆ ಮೂರ್ತಿಯನ್ನು ನಿತ್ಯದಂತೆ ವಿಸರ್ಜನೆ ಮಾಡಬೇಕು. ಪ್ರಾಣ ಪ್ರತಿಷ್ಠೆಯಾದ ನಂತರ ಅವಯವಕ್ಕೆ ಏಟಾದರೆ ಅಥವಾ ಮುರಿದರೆ ಆ ಮೂರ್ತಿಗೆ ಅಕ್ಷತೆಯನ್ನು ಅರ್ಪಿಸಿ ವಿಸರ್ಜಿಸಬೇಕು. ಈ ಘಟನೆಯು ಗಣೇಶ ಚತುರ್ಥಿಯ ದಿನವೇ ನಡೆದರೆ ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ಎರಡನೆಯ ಅಥವಾ ಮೂರನೆಯ ದಿನ ನಡೆದರೆ ಹೊಸ ಮೂರ್ತಿಯನ್ನು ತಂದು ಪೂಜಿಸಬೇಕಾಗಿಲ್ಲ. ಮೂರ್ತಿಯು ಸಂಪೂರ್ಣ ಭಗ್ನವಾದರೆ ಕುಲಪುರೋಹಿತರ ಸಲಹೆಯಂತೆ ಯಥಾವಕಾಶ ‘ಅದ್ಭುತ ದರ್ಶನ ಶಾಂತಿ’ಯನ್ನು ಮಾಡಿಸಬೇಕು. ಗಣೇಶ ಚತುರ್ಥಿಯಂದು ದೀಪ ಆರಿ ಹೋಗುವುದು, ಅರೆಯುವ ಕಲ್ಲು, ಬೀಸುವ ಕಲ್ಲು ಅಥವಾ ಸಾಣೆಕಲ್ಲು ಒಡೆದು ಹೋಗುವುದು, ಕೆಸುವಿನ ಎಲೆಗೆ ಹೂವು ಬರುವುದು, ಮೂರ್ತಿಭಗ್ನ ಇತ್ಯಾದಿ ಘಟನೆಗಳಾದರೆ ಆ ಕುಟುಂಬದಲ್ಲಿ ದ್ರವ್ಯ ಹಾನಿ, ಗಂಭೀರ ರೋಗ ಅಥವಾ ಅಪಮೃತ್ಯು ಆಗುವ ಸಾಧ್ಯತೆಯಿರುತ್ತದೆ; ಅದಕ್ಕಾಗಿ ಮೇಲೆ ಕೊಟ್ಟಿರುವ ಪರಿಹಾರಗಳನ್ನು ಶ್ರದ್ಧೆಯಿಂದ ಮಾಡಬೇಕು.

ರಸ್ತೆಯಲ್ಲೇ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ, ವಿಡಿಯೋ ವೈರಲ್

ಚಂದ್ರ, ಮನಸ್ಸು ಮತ್ತು ಗಣೇಶ ಚತುರ್ಥಿ ಇವುಗಳ ಸಂಬಂಧ
೧.ಸೌರಮಂಡಲದಲ್ಲಿನ ಎಲ್ಲ ಗ್ರಹಗಳಲ್ಲಿ ಚಂದ್ರಗ್ರಹವು ಅತ್ಯಂತ ಚಂಚಲವಾಗಿದೆ. ಆದುದರಿಂದ ಚಂಚಲ ಸ್ವಭಾವವಿರುವವರ ಮನಸ್ಸಿನ ಮೇಲೆ ಚಂದ್ರನ ಸ್ಪಂದನಗಳು ಹೆಚ್ಚು ಕಾರ್ಯ ಮಾಡುತ್ತವೆ.
೨.ಪೃಥ್ವಿಯಿಂದ ಚಂದ್ರಗ್ರಹದ ದರ್ಶನವನ್ನು ನಾವು ಸಹಜವಾಗಿ ಪಡೆದುಕೊಳ್ಳಬಹುದು ಮತ್ತು ಅದನ್ನು ನಾವು ಮನಸ್ಸಿನಲ್ಲಿ ಅತ್ಯಂತ ಸಹಜವಾಗಿ ಯಾವಾಗ ಬೇಕಾದರೂ ನೋಡಬಹುದು.
೩.ಪರಿಣಾಮ : ಗಣೇಶ ಚತುರ್ಥಿಯ ದಿನ ಬ್ರಹ್ಮಾಂಡದಲ್ಲಿ ನಿರ್ಮಾಣವಾಗುವ ರಜೋಗುಣದ ಸ್ಪಂದನಗಳು ಚಂದ್ರನ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿತವಾಗಿ ಚಂಚಲ ಮನಸ್ಸಿರುವ ಮನುಷ್ಯರ ಕಡೆಗೆ ಆಕರ್ಷಿಸಲ್ಪಡುತ್ತವೆ.

ಗಣೇಶ ಚತುರ್ಥಿಯ ವೈಶಿಷ್ಟ್ಯಗಳು
ಈ ದಿನ ರಜೋಗುಣದಿಂದಾಗಿ ಚಂದ್ರನ ಸುತ್ತಲಿರುವ ಪ್ರಭಾವಲಯವು ಬಹಳ ತೇಜಸ್ವಿಯಾಗಿ ಕಾಣಿಸುತ್ತದೆ ಮತ್ತು ಅದು ಚಂಚಲ ಮನಸ್ಸನ್ನು ಸಹಜವಾಗಿ ಆಕರ್ಷಿಸಿಕೊಳ್ಳುತ್ತದೆ. ಈ ದಿನ ಚಂದ್ರದರ್ಶನವನ್ನು ಪಡೆದುಕೊಂಡರೆ, ಚಂದ್ರನು ತನ್ನ ಪ್ರಚಂಡ ರಜೋಗುಣದೊಂದಿಗೆ ಮನಸ್ಸಿನಲ್ಲಿ ಬೇರೂರುತ್ತಾನೆ. ಮನಸ್ಸಿನ ಮೇಲೆ ಮೂಡುವ ಅವನ ಚಿತ್ರವೂ ಅಷ್ಟೇ ಚಂಚಲವಾಗಿರುತ್ತದೆ. ಆದುದರಿಂದ ಅದು ಯಾವ ಕಾರಣಗಳು ಇಲ್ಲದಿರುವಾಗಲೂ ಮತ್ತು ಯಾವುದೇ ಸಮಯದಲ್ಲಿ ಮನಸ್ಸಿನ ಮೇಲೆ ಮೂಡುತ್ತದೆ. ಚಂದ್ರನನ್ನು ನೋಡಿದ ಸಮಯದಲ್ಲಿನ ದೃಶ್ಯವನ್ನು ನೆನಪಿಸಿಕೊಂಡರೂ ಮನಸ್ಸು ಚಂಚಲವಾಗುತ್ತದೆ.

ಗಣೇಶ ಚತುರ್ಥಿಯ ದಿನ ಚಂದ್ರನ ದರ್ಶನವನ್ನು ಪಡೆದುಕೊಳ್ಳದಿರುವುದು : ಮನಸ್ಸಿನ ಚಂಚಲತೆಯು ಸುಮಾರು ಒಂದು ವರ್ಷದವರೆಗೆ ಉಳಿಯುತ್ತದೆ. ಮನಸ್ಸಿನ ಚಂಚಲತೆಯ ಪ್ರಚಂಡ ಪ್ರಭಾವದಿಂದಾಗಿ ಯಾವುದಾದರೊಂದು ಘಟನೆಯು ಘಟಿಸುವ ಮೊದಲೇ ಅದು ಘಟಿಸಿ ಹೋಗಿದೆ ಎಂಬ ತಪ್ಪುತಿಳುವಳಿಕೆ ಅಥವಾ ಗಾಳಿ ಸುದ್ದಿ ಹರಡುವ ಸಾಧ್ಯತೆ ಇರುತ್ತದೆ. ಇದನ್ನೇ ಯಾವುದಾದರೊಂದು ಅಡಚಣೆಯನ್ನು ಮೈಮೇಲೆ ಎಳೆದುಕೊಳ್ಳುವುದು ಎಂದು ಹೇಳುತ್ತಾರೆ. ಈ ಕಾರಣಕ್ಕಾಗಿ ಗಣೇಶ ಚತುರ್ಥಿಯ ದಿನ ಚಂದ್ರನನ್ನು ನೋಡುವುದು ಅಶುಭವೆಂದು ತಿಳಿದುಕೊಳ್ಳುತ್ತಾರೆ.

ಜ್ಯೋತಿಷ್ಯ ಮತ್ತು ಚಂದ್ರದರ್ಶನ : ಗಣೇಶ ಚತುರ್ಥಿಯ ದಿನದಂದು ಯಾವ ವ್ಯಕ್ತಿಯ ರಾಶಿಯಲ್ಲಿ ಯಾವುದೇ ಸ್ಥಾನದಲ್ಲಿ ಚಂದ್ರನಿದ್ದರೆ ಅವನು ಚಂದ್ರದರ್ಶನವನ್ನು ಮಾಡಲೇಬಾರದು. ಇಂತಹ ವ್ಯಕ್ತಿಯು ನೀರಿನಲ್ಲಿ ಕಾಣಿಸುವ ಚಂದ್ರನ ಪ್ರತಿಬಿಂಬವನ್ನು ಸಹ ನೋಡಬಾರದು. ಏಕೆಂದರೆ ನೀರಿನಿಂದ ನೆನೆದಿರುವ ಮಣ್ಣಿನಲ್ಲಿಯೂ ಪ್ರಜನನ ಶಕ್ತಿಯು ಹೆಚ್ಚಾಗಿರುವುದರಿಂದ ಅಲ್ಲಿಯೂ ಪ್ರಚಂಡ ಪ್ರಮಾಣದಲ್ಲಿ ರಜೋಗುಣವು ನಿರ್ಮಾಣವಾಗಿರುತ್ತದೆ.

ಗಣೇಶೋತ್ಸವದ ಸಮಯದಲ್ಲಿ ಮಾಡಬೇಕಾದ ಪ್ರಾರ್ಥನೆ : ಹೇ ಶ್ರೀ ಗಣೇಶಾ, ಗಣೇಶೋತ್ಸವದ ಸಮಯದಲ್ಲಿ ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುವ ನಿನ್ನ ತತ್ತ್ವದ ಲಾಭವು ನನಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಹಿಸುವಂತಾಗಲಿ.

ಸಂಗ್ರಹ : ಗಣಪತಿ’ ಗ್ರಂಥ, ಸನಾತನ ಸಂಸ್ಥೆ

You Might Also Like

ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್

ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!

ಪುಣೆ ಪೋರ್ಶೆ ಕಾರು ಅಪಘಾತ- ಪ್ರಕರಣದ ಅಪ್ರಾಪ್ತ ಆರೋಪಿಗೆ ಜಾಮೀನು

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

TAGGED:Ganesha Festival
Share This Article
Facebook Copy Link Print
Previous Article ರಸ್ತೆಯಲ್ಲೇ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ, ವಿಡಿಯೋ ವೈರಲ್
Next Article Nikhil Kumaraswamy ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up