ಅನುಪಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೋರ ಚಿತ್ರ
ಒರಟ ಶ್ರೀ ನಿರ್ದೇಶನ ಮತ್ತು ಪಿ ಮೂರ್ತಿ ಅವರ ನಿರ್ಮಾಣದ ಚಿತ್ರ
ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿನಿಮಾ ನೋಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಕೊರಗಜ್ಜನ ಆಶೀರ್ವಾದದಿಂದ ಆರಂಭವಾದ ಕೋರ ಚಿತ್ರ
ರತ್ನಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಪಿ ಮೂರ್ತಿ ನಿರ್ಮಿಸಿ, ಒರಟ ಶ್ರೀ ನಿರ್ದೇಶಿಸಿದ ಮತ್ತು ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿದ್ದ ಸುನಾಮಿ ಕಿಟ್ಟಿ ನಾಯಕ ನಟನಾಗಿ ಹಾಗೂ ಚರಿಷ್ಮಾ ಜೋಡಿಯಾಗಿ ನಟಿಸಿರುವ ಕೋರ ಚಿತ್ರ ಇಂದು ಅನುಪಮಾ ಚಿತ್ರಮಂದಿರದಲ್ಲಿ ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ಬಿಡುಗಡೆಯಾಯಿತು. ವಿಶೇಷವಾಗಿ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಚಿತ್ರಮಂದಿರಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿ ಕೋರ ಚಿತ್ರ ಕೊನೆಯವರೆಗೂ ನೋಡಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಇನ್ನು ಕೊರಗಜ್ಜನ ಆಶೀರ್ವಾದದಿಂದ ಆರಂಭವಾದ ಕೋರ ಚಿತ್ರ ಆದಿವಾಸಿ ಬುಡಕಟ್ಟು ಜನಾಂಗ ಹಾಗೂ ರಾಕ್ಷಸನೊಬ್ಬನ ಕುರಿತಾದ ಕಥೆಯನ್ನು ಹೊಂದಿರುವ ಚಿತ್ರವಾಗಿದೆ. ಈ ಕೋರ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಸಕಲೇಶಪುರ, ಶೃಂಗೇರಿ, ಉಡುಪಿ, ಮಂಗಳೂರು ಮೊದಲಾದ ಕಡೆಗಳಲ್ಲಿ ಕಾಡಿನಲ್ಲೇ ಶೂಟಿಂಗ್ ಮಾಡಲಾಗಿದೆ .
ಇನ್ನು ಈ ಚಿತ್ರದಲ್ಲಿ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರು ಆಗಿರುವ ಪಿ. ಮೂರ್ತಿಯವರು ನಿರ್ಮಿಸಿ ತಾನೂ ಕೂಡಾ ಕಠೋರ ಎಂಬ ಪಾತ್ರ ನಿರ್ವಹಿಸಿದ್ದಾರೆ .ಚಿತ್ರದ ತಾರಾಗಣದಲ್ಲಿ ಎಂ.ಕೆ.ಮಠ, ಮುನಿ, ನೀನಾಸಂ ಅಶ್ವಥ್, ಯತಿರಾಜ್, ಸೌಜನ್ಯ ನಟಿಸಿದ್ದಾರೆ, ಹೇಮಂತ್ ಕುಮಾರ್ ಸಂಗೀತವಿದ್ದು, ಸೆಲ್ವಂ ಛಾಯಾಗ್ರಾಹಣವಿದ್ದು ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡಿಗರು ಚಿತ್ರವನ್ನು ನೋಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.