ಬೇರೆ ಜೈಲಿಗೆ ದರ್ಶನ್ ಗ್ಯಾಂಗ್ ಶಿಫ್ಟ್ ಮಾಡಲು ಸಿಎಂ ತಾಕೀತು

ಬೆಂಗಳೂರು: ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ. … Continue reading ಬೇರೆ ಜೈಲಿಗೆ ದರ್ಶನ್ ಗ್ಯಾಂಗ್ ಶಿಫ್ಟ್ ಮಾಡಲು ಸಿಎಂ ತಾಕೀತು