ಚಿಕ್ಕಬಳ್ಳಾಪುರ: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ಬಳಿ ಅದ್ದೂರಿ ಸ್ವಾಗತ ಕೋರಲಾಯಿತು.
ವಿಮಾನ ನಿಲ್ದಾಣದ ಬಿವಿಐಪಿ ಲಾಂಚ್‌ನಿಂದ ಕುಮಾರಸ್ವಾಮಿ ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು. ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಜೈಲಿನಿಂದ ಇಂದು ರಿಲೀಸ್

ಹೂ ಮಾಲೆ, ಪುಷ್ಪ ಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು. ವಿಶೇಷ ಎಂದರೆ ಜೆಸಿಬಿ ಹಾಗೂ ಕ್ರೇನ್‌ಗಳ ಮೂಲಕ ಬೃಃತ್ ಸೇಬು ಮತ್ತು ಮೂಸಂಬಿ ಹಾರ ಹಾಕಿ ಸ್ವಾಗತಿಸಿದರು. ಈ ವೇಳೆ ಸ್ಥಳದಲ್ಲಿ ತಳ್ಳಾಟ ನೂಕಾಟವಾಯಿತು.ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!
ಸಿಐಎಸ್ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಹೊರಟ ಕುಮಾರಸ್ವಾಮಿ ಅವರಿಗೆ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು. ಇದನ್ನೂ ಓದಿ: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ

