ಇಂದು ಮುಂಜಾನೆ ಒಂದೇ ಕುಟುಂಬದ ಮೂವರು ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕು ತೆಕ್ಕಟ್ಟೆಯಲ್ಲಿ ನಡೆದಿದೆ.
ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದರು ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯರಿಂದ ಮಹಿಳೆಯರ ರಕ್ಷಣೆ ಮಾಡಿದ್ದಾರೆ.
ಸಾಲಭಾದೆಯಿಂದ ಸಾಮೂಹಿಕ ಆತ್ಮಹತ್ಯೆ ಯತ್ನ ಸಂಶಯ ವ್ಯಕ್ತವಾಗಿದ್ದು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಕುಟುಂಬ ಮುಂದಾಗಿದ್ದಾರೆಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

