By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸೇನಾ ಗೌರವ ವಂದನೆ ಮೂಲಕ ಸ್ವಾಗತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರತಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸೇನಾ ಗೌರವ ವಂದನೆ ಮೂಲಕ ಸ್ವಾಗತ

BlogLatestMain PostTop Storiesರಾಷ್ಟ್ರೀಯ-National

ಭಾರತಕ್ಕೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಸೇನಾ ಗೌರವ ವಂದನೆ ಮೂಲಕ ಸ್ವಾಗತ

Kurta Pyjamas, Anarkali: JD Vance's Children Land In India In Ethnic Attire

Published April 21, 2025
Share
2 Min Read
JD Vance JD Vance JD Vance
SHARE

ದೆಹಲಿ: ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಜೆಡಿ ವ್ಯಾನ್ಸ್ ಅವರ ಪತ್ನಿ ವ್ಯಾನ್ಸ್ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಅಮೆರಿಕದ ಆಡಳಿತದ ಇತರ ಹಿರಿಯ ಸದಸ್ಯರು ಜೊತೆಗಿದ್ದಾರೆ. ಅಮೆರಿಕ ಉಪಾಧ್ಯಕ್ಷ ಮತ್ತು ಅವರ ಪತ್ನಿಯನ್ನು ಪಾಲಂ ವಾಯುನೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬರಮಾಡಿಕೊಂಡರು.

BREAKING 🚨 Vice President JD Vance just landed in India for another historic trip. He’s a machine 🔥

AMERICA IS BACK ON THE WORLD STAGE AGAIN pic.twitter.com/8d8cNGglCn

— MAGA Voice (@MAGAVoice) April 21, 2025

13 ವರ್ಷಗಳಲ್ಲಿ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಅಮೆರಿಕದ ಉಪಾಧ್ಯಕ್ಷರು ವ್ಯಾನ್ಸ್. ಕಳೆದ ದಶಕದಲ್ಲಿ ಯಾವುದೇ ಹಾಲಿ ಅಮೆರಿಕದ ಉಪಾಧ್ಯಕ್ಷರು ಭಾರತಕ್ಕೆ ಭೇಟಿ ನೀಡಿಲ್ಲವಾದ್ದರಿಂದ ಈ ಭೇಟಿ ವಿಶೇಷವಾಗಿದೆ.

ಸೇನಾ ಗೌರವದ ಸ್ವಾಗತ :
ಭಾರತ ಪ್ರವಾಸದಲ್ಲಿರುವ ಅಮೆರಿಕ ಉಫಾಧ್ಯಕ್ಷ ಜೆಡಿ ವ್ಯಾನ್ಸ್‌ ಅವರಿಗೆ, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಸೇನಾ ಗೌರವ ವಂದನೆ ಸಲ್ಲಿಸಲಾಗಿದೆ. ಯುಎಸ್‌ ಉಪಾಧ್ಯಕ್ಷರಿಗೆ ಭಾರತದ ಮೂರೂ ರಕ್ಷಣಾ ಪಡೆಗಳಿಂದ ಗೌರವ ವಂದನೆ ಸಲ್ಲಿಸಲಾಯಿತು.

ಜೆಡಿ ವ್ಯಾನ್ಸ್‌ ಅವರು ಇಂದು ಪತ್ನಿ ಉಷಾ ವ್ಯಾನ್ಸ್‌ ಮತ್ತು ಮೂವರು ಮಕ್ಕಳೊಂದಿಗೆ ಭಾರತಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಭೆ ನಡೆಯುವುದೂ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಗ್ರಾ, ಜೈಪುರ್ ಮುಂತಾದ ಕಡೆಯೂ ಅವರು ತೆರಳಲಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಶೀಘ್ರದಲ್ಲೇ ಅಂಕಿತ ಹಾಕುವ ಒಂದು ಮುಖ್ಯ ಅಜೆಂಡಾ ಈ ಭೇಟಿಯ ಹಿಂದಿದೆ. ಇದರ ಜೊತೆಗೆ, ಎರಡೂ ದೇಶಗಳ ನಡುವಿನ ಮೈತ್ರಿಯನ್ನು ಗಟ್ಟಿಗೊಳಿಸಲು ವಿಧಗಳನ್ನು ಅವಲೋಕಿಸುವ ಸಾಧ್ಯತೆ ಇದೆ. ವ್ಯಾಪಾರ, ರಕ್ಷಣೆ, ಸುಂಕ ಇತ್ಯಾದಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಯುವ ನಿರೀಕ್ಷೆ ಇದೆ.

ವ್ಯಾನ್ಸ್ ಗೆ ಪ್ರಧಾನಿ ಮೋದಿ ಆತಿಥ್ಯ :
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 7 ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಉಪರಾಷ್ಟ್ರಪತಿ ವ್ಯಾನ್ಸ್ ಅವರನ್ನು ಆತಿಥ್ಯ ವಹಿಸಲಿದ್ದಾರೆ. ಈ ಸಭೆಯಲ್ಲಿ, ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಚರ್ಚಿಸುವುದರ ಜೊತೆಗೆ, ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಕಾರ್ಯತಂತ್ರ ಮತ್ತು ಆರ್ಥಿಕ ಸಂಬಂಧಗಳನ್ನು ಗಾಢವಾಗಿಸುವ ಮಾರ್ಗಗಳನ್ನು ಪರಿಗಣಿಸಲಾಗುವುದು.

ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಉಪಸ್ಥಿತರಿರುತ್ತಾರೆ. ವ್ಯಾನ್ಸ್ ಜೊತೆಗೆ, ಪೆಂಟಗನ್ ಮತ್ತು ವಿದೇಶಾಂಗ ಇಲಾಖೆಯ ಪ್ರತಿನಿಧಿಗಳು ಸೇರಿದಂತೆ ಅಮೆರಿಕದ ಐದು ಸದಸ್ಯರ ಉನ್ನತ ಮಟ್ಟದ ನಿಯೋಗವೂ ಭಾರತಕ್ಕೆ ಬಂದಿದೆ. ಏಪ್ರಿಲ್ 22 ರಂದು, ವ್ಯಾನ್ಸ್ ಜೈಪುರದ ಹಲವಾರು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ, ಇದರಲ್ಲಿ ಅಂಬರ್ ಕೋಟೆ ಎಂದೂ ಕರೆಯಲ್ಪಡುವ ಅಮೆರ್ ಕೋಟೆ ಸೇರಿದೆ. ಈ ಕೋಟೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ.

ಏರ್‌ಪೋರ್ಟ್‌ ತುಂಬೆಲ್ಲಾ ವ್ಯಾನ್ಸ್ ಮಕ್ಕಳ ಓಡಾಟ :
“ಅಪ್ಪಾ, ಅಮ್ಮಾ ಅಲ್ಲೋಡಿ, ಇಲ್ನೋಡಿ..” ಅಂತಾ ಪಾಲಂ ವಿಮಾನ ನಿಲ್ದಾಣದ ತುಂಬೆಲ್ಲಾ ಖುಷಿ ಖುಷಿಯಾಗಿ ಓಡಾಡುತ್ತಿದ್ದ ಮಕ್ಕಳನ್ನು ಹಿಡಿದು, ಕ್ಯಾಮರಾ ಮುಂದೆ ನಿಲ್ಲಿಸಿ ಫೋಟೋಗೆ ಪೋಸ್‌ ಕೊಡುವುದೇ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ ಮತ್ತು ಪತ್ನಿ ಉಷಾ ವ್ಯಾನ್ಸ್‌ಗೆ ಸವಾಲಿನ ಕೆಲಸವಾಗಿತ್ತು. ಈ ವೇಳೆ ವ್ಯಾನ್ಸ್‌ ದಂಪತಿಯ ಮೂವರೂ ಮಕ್ಕಳು ಭಾರತೀಯ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನ ಸೆಳೆದರು.

#WATCH | Delhi: Vice President of the United States, JD Vance, Second Lady Usha Vance, along with their children, at Palam airport.

Vice President JD Vance is on his first official visit to India and will meet PM Modi later today. pic.twitter.com/LBDQES2mz1

— ANI (@ANI) April 21, 2025

ಜೆಡಿ ವ್ಯಾನ್ಸ್‌ ಮತ್ತು ಉಷಾ ವ್ಯಾನ್ಸ್‌ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣುಮಗು ಸೇರದಂತೆ ಒಟ್ಟು ಮೂವರು ಮಕ್ಕಳಿದ್ದಾರೆ. ಮೂರೂ ಮಕ್ಕಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿದ್ದು ವಿಶೇಷವಾಗಿತ್ತು.

You Might Also Like

ಆಂಧ್ರಪ್ರದೇಶದ ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ

‘ಆಪರೇಷನ್ ಸಿಂಧೂರ್’ ಇದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ : ನಿಖಿಲ್ ಕುಮಾರಸ್ವಾಮಿ

ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ಗಳನ್ನು ಸ್ಮಾರ್ಟ್ ಮೀಟರ್ ಆಗಿ ಬದಲಾವಣೆ : ಕೆ.ಜೆ.ಜಾರ್ಜ್

ಮಲಯಾಳಂನ ನಟ ಹೋಟೆಲ್‌ನಲ್ಲಿ ಶವವಾಗಿ ಪತ್ತೆ..!

TAGGED:JD Vance
Share This Article
Facebook Copy Link Print
Previous Article Om Prakash Om Prakash Om Prakash BIG NEWS : ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ..!
Next Article CM Sid CM Sid CM Sid ಬೆಳಗಾವಿಯಲ್ಲಿ ಕಲಾಮಂದಿರ ಮತ್ತು ವಾಣಿಜ್ಯ ಮಳಿಗೆ ಲೋಕಾರ್ಪಣೆ ಮಾಡಿದ ಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up