ದಕ್ಷಿಣ ಕನ್ನಡ: ನಿರ್ಮಾಣ ಹಂತದಲ್ಲಿ ಖಾಸಗಿ ಕಟ್ಟಡವೊಂದು ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ಮಂಗಳೂರು(Mangalore) ನಗರದ ಬಲ್ಮಠ ಬಳಿ ಸಂಭೌಿಸಿದೆ.
ಸದ್ಯ ಘಟನೆ ಕುರಿತು ತಿಳಿದು ಸ್ಥಳಕ್ಕೆ ದೌಡಾಯಿಸಿದ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳದ ಸಿಬ್ಬಂದಿಗಳು ಓರ್ವ ಕೂಲಿ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರದಲ್ಲಿ ಎಲ್ಲೇ ಹೋದರೂ ಸಹ ದರ್ಶನ್ ಪ್ರಕರಣ ಏನು ಅಂತ ನನ್ನನ್ನೇ ಕೇಳ್ತಾರೆ: ನಟ ಸಾಯಿಕುಮಾರ್
ಈಗಾಗಲೇ ಮಣ್ಣಿನಡಿಯಲ್ಲಿರುವ ಕಾರ್ಮಿಕರ ಜೊತೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದು, ಅವಶೇಷದಡಿ ಸಿಲುಕಿದ್ದ ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿಯ ಕರ್ನಾಟಕ ಭವನದ ಅಡುಗೆ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಮಣ್ಣಿನ ದಿಬ್ಬ ಸಡಿಲಗೊಂಡಿದ್ದು, ರಿಟೇನಿಂಗ್ ವಾಲ್ ಹಾಗೂ ಹಾಕಲಾದ ಶೀಟ್ಗಳ ಮೇಲೆ ಮಣ್ಣು ಬಿದ್ದಿದೆ. ಇದರಿಂದ ರಿಟೇನಿಂಗ್ ವಾಲ್ ಹಾಗೂ ಶೀಟ್ ಮಧ್ಯೆ ಕಾರ್ಮಿಕರು ಸಿಲುಕಿದ್ದು, ಕೋರ್ ಕಟ್ಟಿಂಗ್ ಮೂಲಕ ರಕ್ಷಣ ಕಾರ್ಯ ನಡೆಸಲಾಗುತ್ತಿದೆ. ಅದರಂತೆ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವನಿಗಾಗಿ ಕಾರ್ಯಾಚರಣೆ ಮುಂದವರೆದಿದೆ. ಇದನ್ನೂ ಓದಿ: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್- ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ