ಹುಬ್ಬಳ್ಳಿ ; ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಚಾರದಲ್ಲಿ ರಾಷ್ಟ್ರೀಯ ವರಿಷ್ಠರು ಒಂದು ವರ್ಷದ ಬಳಿಕ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ನಮ್ಮದ್ದು ರಾಷ್ಟ್ರೀಯ ಪಕ್ಷ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪ್ರವಾಸಿ ಮಂದಿರದಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ನಮ್ಮದ್ದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಕಳೆದೊಂದು ವರ್ಷದಿಂದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ಯಾವುದೇ ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಹಣಕಾಸಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಗುತ್ತಿಗೆದಾರರ 60 ಸಾವಿರ ಕೋಟಿ ಬಾಕಿ ಬಿಲ್ ಇದೆ. ಇದನ್ನು ಸರಿಪಡಿಸುವ ಬದಲು ಸರಕಾರ ಹಾಲಿನ ದರ ಹಾಗೂ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಸರಿಯಲ್ಲ ಎಂದರು.
ಹಾಲಿನ ದರ 4 ರೂ. ಹೆಚ್ಚಳ ಮಾಡಿದ್ದು ನೇರವಾಗಿ ಹೈನುಗಾರಿಕೆ ಮಾಡುವವರಿಗೆ ಕೊಡುವುದಾಗಿ ಹೇಳಿರುವ ಸರಕಾರ ಜನಸಾಮಾನ್ಯರ ಮೇಲೆ ಬರೆ ಹಾಕುವ ಬದಲು ಸರಕಾರದ ಖಜಾನೆಯಿಂದ ಕೊಡಲಿ ಎಂದು ಸವಾಲ್ ಹಾಕಿದರು.
ವರದಿ : ದಯಾನಂದ. ಎಂ.

