ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಲೇ.ಚಿಕ್ಕಣ್ಣ ಪುತ್ರ ಶಿವಣ್ಣ (50) ಎಂಬ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದ ಶಿವಣ್ಣ (59) ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. 2023ರ ಡಿ.11 ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದಾಗ ಆರೋಪಿಯೂ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಮ್ಮನಿಗೆ ಹೇಳಬಾರದೆಂದು ಬೆದರಿಕೆ ಕೂಡ ಹಾಕಿದ್ದ.
ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೃಷ್ಣರಾಜ ಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012ರ ಅಡಿಯಲ್ಲಿ ದೂರು ದಾಖಲಾಗಿತ್ತು. ಅಂದಿನ ಪಿಎಸ್‌ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿಂದೆ ಕೃಷ್ಣರಾಜ ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ. ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

