ನವದೆಹಲಿ: ಲೋಕಸಭಾ ಚುನಾವಣೆ ಮುಗಿದಿದ್ದು, ಇನ್ನೇನು ಫಲಿತಾಂಶಕ್ಕೆ (Lok Sabha Election Results) ಕ್ಷಣಗಣನೆ ಆರಂಭವಾಗಿದೆ.
ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಇಂದು ಇಂಡಿಯಾ (INDIA) ಬ್ಲಾಕ್ ನಾಯಕರು ಸಭೆ ನಡೆಸಲಿದ್ದಾರೆ. ಟಿಎಂಸಿ ಮತ್ತು ಪಿಡಿಪಿ ಸಭೆಯಿಂದ ಹೊರಗುಳಿಯಲು ಸಿದ್ಧವಾಗಿದ್ದರೂ, ಜೂನ್ 4ರಂದು ಮತ ಎಣಿಕೆಗೆ ತಮ್ಮ ಕಾರ್ಯತಂತ್ರವನ್ನು ಚರ್ಚಿಸಲು ಇಂಡಿಯ ಬಣದ ಹಿರಿಯ ನಾಯಕರು ಇಂದು ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Malikarjuna Kharge) ಅವರ ನಿವಾಸದಲ್ಲಿ ಇಂದು ಸಿಪಿಐಎಂ, ಸಿಪಿಐ, ಡಿಎಂಕೆ, ಎಐಡಿಎಂಕೆ, ಆರ್ಜೆಡಿ, ಶಿವಸೇನೆ ಮತ್ತು ಎನ್ಸಿಪಿಯ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ಚಂದ್ರಶೇಖರನ್ ಪತ್ನಿ ಕವಿತಾ ಆರೋಗ್ಯದಲ್ಲಿ ಏರುಪೇರು
ಇನ್ನು ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಇರುವುದರಿಂದ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamtha Baneerje) ಅವರು ಸಭೆಗೆ ಹಾಜರಾಗುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದನ್ನೂ ಓದಿ: ಇಂದು ಭವಾನಿ ರೇವಣ್ಣವಿಚಾರಣೆಗೆ ಗೈರು – ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಭವಾನಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೇರಿದಂತೆ ಪ್ರತಿಪಕ್ಷಗಳ ಮೈತ್ರಿಕೂಟದ ಎಲ್ಲಾ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಮುಂದುವರಿದ ಬಾಂಬ್ ಬೆದರಿಕೆಗಳು -ಇಂಡಿಗೋ ವಿಮಾನಕ್ಕೆ ಮತ್ತೆ ಬೆದರಿಕೆ
ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರೂ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ತಮ್ಮ ಪಕ್ಷದ ನಾಯಕ ಟಿ.ಆರ್ ಬಾಲು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ