ನವದೆಹಲಿ: ಲೋಕಸಭೆ ಚುನಾವಣೆ(Lok Sabha Election)ಯ ನಂತರ ಮೊದಲ ಸಂಸತ್ ಅಧಿವೇಶನ ಪ್ರಾರಂಭವಾಗಿ ಎರಡು ದಿನಗಳ ಲೋಕಸಭಾ ಸ್ಪೀಕರ್ (Speaker) ಚುನಾವಣೆ ನಡೆಯಲಿದೆ. ಇದೇ ಜೂನ್ 26 ರಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಬೆಂಬಲಿಸುವ ಪತ್ರವನ್ನು ಸದಸ್ಯರು ಒಂದು ದಿನ ಮುಂಚಿತವಾಗಿ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಗುರುವಾರ ತಿಳಿಸಿದೆ.
ಚುನಾವಣೆಗೆ ನಿಗದಿಪಡಿಸಿದ ದಿನಾಂಕದ ಹಿಂದಿನ ದಿನದಂದು ಮಧ್ಯಾಹ್ನ 12 ಗಂಟೆಯ ಮೊದಲು ಯಾವುದೇ ಸಮಯದಲ್ಲಿ, ಯಾವುದೇ ಸದಸ್ಯರು ಸ್ಪೀಕರ್ ಕಚೇರಿಗೆ ಇನ್ನೊಬ್ಬ ಸದಸ್ಯರನ್ನು ಬೆಂಬಲಿಸುವ ಪ್ರಸ್ತಾವನೆಯನ್ನು ಸಲ್ಲಿಸಬಹುದು. ಜೂನ್ 25ರ ಮಂಗಳವಾರ ಮಧ್ಯಾಹ್ನ 12 ಗಂಟೆಯ ಮೊದಲು ಸ್ಪೀಕರ್ ಆಯ್ಕೆಗೆ ಸೂಚನೆಗಳನ್ನು ನೀಡಬಹುದು. ಇದನ್ನೂ ಓದಿ:ಒಂದೂವರೆ ವರ್ಷದ ಹಿಂದೆ ಕಳವಾಗಿದ್ದ 2 ಸೀಮೆ ಹಸುಗಳು- 1.70 ಲಕ್ಷ ಮೌಲ್ಯದ ಗೋವುಗಳು ಪತ್ತೆ
ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲ ಎರಡು ದಿನ ಮೀಸಲಾಗಿದ್ದರೆ, ಜೂನ್ 26ಕ್ಕೆ ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ಲೋಕಸಭೆ ಚುನಾವಣೆಯ ನಂತರ ಮೊದಲ ಸಂಸತ್ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ ಎಂದು ಹೊಸದಾಗಿ ಸೇರ್ಪಡೆಗೊಂಡ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಇದನ್ನೂ ಓದಿ:ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ರಾಜೀನಾಮೆ ಕೊಟ್ಟ ಸಿಕ್ಕಿಂ ಸಿಎಂ ಪತ್ನಿ
ಜೂನ್ 27 ರಂದು ರಾಷ್ಟ್ರಪತಿ ಭಾಷಣದ ನಂತರ ಪ್ರಧಾನಿ ಮೋದಿ ಅವರು ಸಂಸತ್ತಿಗೆ ತಮ್ಮ ಮಂತ್ರಿಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಅದು ತನ್ನದೇ ಆದ ಮ್ಯಾಜಿಕ್ ನಂಬರ್ 272 ಅನ್ನು ಸಾಧಿಸಲು ವಿಫಲವಾಯಿತು. ಪಕ್ಷವು 240 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರಿಂದ, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ), ನಿತೀಶ್ ಕುಮಾರ್ ಅವರ ಜನತಾ ದಳ-ಯುನೈಟೆಡ್ (ಜೆಡಿಯು), ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ (ಎಲ್ಜೆಪಿ)ಸೇರಿದಂತೆ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿತು.ಇದನ್ನೂ ಓದಿ:ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್ ಜಾರಿ- ಪರದಾಡಿದ ವಾಹನ ಸವಾರರು

