ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯದ ಆದೇಶದ ಮೇರೆಗೆ ಮೊದಲ FIR ದಾಖಲಿಸಿದ್ದಾರೆ.
ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ A1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ A2 ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ A3, ಭೂ ಮಾಲೀಕ ದೇವರಾಜು A4 ಹಾಗೂ A5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.

