ಬೆಂಗಳೂರು : ಇಂದು ವಿಶ್ವ ಶ್ವಾಸಕೋಶ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆ ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿರುವವರ ಡೇಟಾ ಬಿಡುಗಡೆ ಮಾಡಿದೆ.
ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ 2023ರಲ್ಲಿ ಒಟ್ಟು 5,272 ಶ್ವಾಸಕೋಶ ಕ್ಯಾನ್ಸರ್ ಪ್ರಕರಣ ದಾಖಳಾಗಿವೆ. ಶೇ 9.6 ರಷ್ಟು ಪುರುಷರಲ್ಲಿ ಹಾಗೂ ಶೇ 3.2ರಷ್ಟು ಮಹಿಳೆಯರಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಕಂಡುಬಂದಿದೆ.
ಬೆಂಗಳೂರಿನಲ್ಲಿ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳವಾಗಿದ್ದು 2023ರಲ್ಲಿ 900 ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.
ಧೂಮಪಾನ ಮಾಡುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಶ್ವಾಸಕೋಶ ಕ್ಯಾನ್ಸರ್ ಪಾಸಿವ್ ಸ್ಮೋಕರ್ ಗಳಿಗೂ ಶ್ವಾಸಕೋಶದ ಕ್ಯಾನ್ಸರ್ ಕಂಟಕವಾಗಿದೆ.
ಸಿಲಿಕಾನ್ ಸಿಟಿಯ ಧೂಳು ಶ್ವಾಸಕೋಶದ ಕ್ಯಾನ್ಸರ್ ಗೆ ಕಾರಣವಾಗುತ್ತಿದ್ದು ಯಾವುದೇ ದುರಭ್ಯಾಸ ಇಲ್ಲವಾದ್ರೂ ಶ್ವಾಸಕೋಶದ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ.