ಮಂಡ್ಯ: ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ (Stone Pelting) ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಟ್ಣದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.
ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳ ಕಲ್ಲುತೂರಾಟ ಖಂಡಿಸಿ ಮದ್ದೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಂದ್‌ಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸ್ವ
ಯಂಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಬಾಗಿಲು ಮುಚ್ಚಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮೆಡಿಕಲ್ ಸ್ಟೋರ್, ಹಾಲಿನ ಬೂತ್ ಹಾಗೂ ತರಕಾರಿ ಅಂಗಡಿಗಳ ಹೊರತುಪಡಿಸಿದರೆ ಉಳಿದೆಲ್ಲಾ ವ್ಯಾಪಾರ-ವಹಿವಾಟು ನಿಲ್ಲಿಸಿ ಮದ್ದೂರು ಜನತೆ ಬಂದ್‌ಗೆ ಬೆಂಬಲ ನೀಡಿದ್ದಾರೆ.
ಇನ್ನೂ ಮದ್ದೂರು ಬಂದ್ ಹಿನ್ನೆಲೆ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಟೌನ್ ರೌಂಡ್ಸ್ ಮಾಡಿದ್ದಾರೆ.
ಸೂಕ್ಷ್ಮ ಪ್ರದೇಶಗಳಾದ ರಾಮ್ ರಹೀಮ್ ನಗರ, ಸಿದ್ಧಾರ್ಥನಗರ, ಚನ್ನೇಗೌಡ ಬಡಾವಣೆಯಲ್ಲೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 4 ಎಸ್ಪಿ, 4 ಅಡಿಷನಲ್ ಎಸ್ಪಿ, 15 ಡಿವೈಎಸ್‌ಪಿ, 35 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್, 10 ಡಿಆರ್, 15 ಕೆಎಸ್‌ಆರ್‌ಪಿ ತುಕಡಿ ಸೇರಿ ಒಟ್ಟು 1500 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

