ಬೆಳ್ತಂಗಡಿ : ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಆದೇಶ ಹೊರಡಿಸಿದ್ದು, ತಿಮರೋಡಿ ವಿರುದ್ಧ 32 ಪ್ರಕರಣಗಳು ದಾಖಲಾಗಿವೆ. ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿ ಅವರ ವಿರುದ್ಧ ದಕ್ಷಿಣ ಕನ್ನಡದ ವಿವಿಧ ಠಾಣೆಗಳಲ್ಲಿ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು.
ಈ ಪ್ರಕರಣಗಳ ಸಂಬಂಧ ಬೆಳ್ತಂಗಡಿ ಪೊಲೀಸರ ವರದಿಯನ್ನು ಆಧರಿಸಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಇಲಾಖೆಯ ವರದಿಯ ಆಧಾರದ ಮೇಲೆ ಕರ್ನಾಟಕ ರಾಜ್ಯ ಪೊಲೀಸ್ ಕಾಯಿದೆಯ ಸೆಕ್ಷನ್ 55ರ ಅಡಿಯಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಒಂದು ವರ್ಷಗಳ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

