ಮಂಡ್ಯ: ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರ ಪಾಂಡೆ ಪಿ.ಎಸ್.ಮಲ್ಲಯ್ಯ(93) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪುರಗಾಲಿ ಗ್ರಾಮದವರಾದ ಮಲ್ಲಯ್ಯ ಅವರು ತಾಲೂಕು ಬೋರ್ಡ್ ಸದಸ್ಯರಾಗಿ, ಪುರಿಗಾಲಿ ಗ್ರಾ.ಪಂ, ಹಾಲು ಉತ್ಪಾದಕರ ಸಂಘ, ಪ್ರಾಥಮಿಕ ಕೃಷಿ ಪರಿಷತ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಶಾಸಕ ನರೇಂದ್ರಸ್ವಾಮಿ ಸೇರಿ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಹುಟ್ಟೂರು ಪುರಿಗಾಲಿಯಲ್ಲಿ ಮಲ್ಲಯ್ಯರ ಅಂತ್ಯಕ್ರಿಯೆ ನಡೆಯಲಿದೆ.