ಫ್ಲೋರಿಡಾ: ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದಿತ್ತು. ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಹತ್ಯೆ ಯತ್ನ ನಡೆದಿದೆ. ಅಮೆರಿಕ ಮಾಜಿ ಅಧ್ಯಕ್ಷ, ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಅವರ ಗಾಲ್ಫ್ ಕ್ಲಬ್‌ನಲ್ಲಿ ನಿನ್ನೆ ಭಾನುವಾರ ಮತ್ತೆ ಹತ್ಯೆ ದಾಳಿಗೆ ಒಳಗಾಗಿದ್ದಾರೆ ಎಂದು ಎಫ್‌ಬಿಐ ತಿಳಿಸಿದೆ.
ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಅವರ ಗಾಲ್ಫ್ ಕೋರ್ಸ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಶಸ್ತ್ರಾಸ್ತ್ರದೊಂದಿಗೆ ಬಂಧಿಸಲಾಗಿದೆ ಎಂದು ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಗುಂಡಿನ ಸದ್ದು ಕೇಳಿದಾಗ ಟ್ರಂಪ್ ಗಾಲ್ಫ್ ಆಡುತ್ತಿದ್ದರು ಎಂದು ಬಹು ಮಾಧ್ಯಮ ವರದಿಗಳು ತಿಳಿಸಿವೆ. ಗುಂಡು ಹಾರಿಸಿದಾಗ ಟ್ರಂಪ್ ಅವರ ರಹಸ್ಯ ಸೇವೆಯ ರಕ್ಷಣಾತ್ಮಕ ಪಡೆ ಜೊತೆಯಲ್ಲೇ ಇದ್ದರು.
ಡೊನಾಲ್ಡ್ ಟ್ರಂಪ್ ಅವರು ಗಾಲ್ಫ್ ನಲ್ಲಿ ಆಡುತ್ತಿದ್ದ ಸ್ಥಳದಿಂದ ಸರಿಸುಮಾರು 400 ಗಜಗಳಷ್ಟು ದೂರದಲ್ಲಿ ಪೊದೆ ಮೂಲಕ ಎಕೆ ಶೈಲಿಯ ರೈಫಲ್ ಅಂಟಿಕೊಂಡಿರುವುದನ್ನು ಅಮೆರಿಕದ ಸೀಕ್ರೇಟ್ ಸರ್ವಿಸ್ ಪತ್ತೆಹಚ್ಚಿದೆ. ಈ ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಕ್ರೆಟ್ ಸರ್ವಿಸ್ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಟ್ರಂಪ್ ಮೇಲಿನ ದಾಳಿಯ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಎಸ್ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗೆ ವಿವರಿಸಲಾಗಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ಜುಲೈ 13 ರಂದು, ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ಚುನಾವಣಾ ರ್ಯಾಲಿ ವೇಳೆ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಲಾಗಿತ್ತು, ಅವರ ಅವರ ಕಿವಿ ಪಕ್ಕದಲ್ಲಿ ಹಾದುಹೋಗಿ ರಕ್ತ ಸುರಿಯಿತು.