ಬೆಂಗಳೂರು: ವ್ಯಕ್ತಿಯೋರ್ವ ವಾಕಿಂಗ್ ಗೆ ತೆರಳುತ್ತಿದ್ದಮಹಿಳೆ ಯನ್ನು ತಬ್ಬಿ ಚುಂಬಿಸಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ. ಆಗಸ್ಟ್ 02ರ ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ್ದು, ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿಸೆರೆಯಾಗಿದೆ.
ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ ಎನ್ನಲಾದ ಘಟನೆ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೊಂದ ಮಹಿಳೆ ಉತ್ತರ ಭಾರತ ಮೂಲದವರಾಗಿದ್ದು, ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಸ್ನೇಹಿತೆಯರೊಂದಿಗೆ ವಾಕಿಂಗ್ ಹೋಗುತ್ತಿದ್ದರು.
ಶುಕ್ರವಾರ ಮುಂಜಾನೆ ತನ್ನ ಸ್ನೇಹಿತೆಯರಿಗಾಗಿ ಕಾಯುತ್ತಿದ್ದಾಗ ದಿಢೀರ್ ಬಂದಿದ್ದ ಆರೋಪಿ, ಹಿಂಬದಿಯಿಂದ ಮಹಿಳೆಯ ಕೈಹಿಡಿದು, ತನ್ನ ಒಂದು ಕೈಯಿಂದ ಆಕೆಯ ಬಾಯಿ ಮುಚ್ಚಿದ್ದಾನೆ. ಈ ವೇಳೆ ಮಹಿಳೆ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದರೂ ಸಹ ಆಕೆಯನ್ನು ಹಿಂಬಾಲಿಸಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ.
ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೋಣನಕುಂಟೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.