ಹುಬ್ಬಳ್ಳಿ : ಪ್ರಯಾಣಿಕನೊಬ್ಬ ವಿಮಾನದ ತುರ್ತು ಬಾಗಿಲನ್ನು ತೆರೆದಿದ್ದರಿಂದ ಸಹ ಪ್ರಯಾಣಿಕರು ಆತಂಕಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಳೆದ ಶುಕ್ರವಾರ ನಡೆದಿದೆ.
ಶುಕ್ರವಾರ ಸಂಜೆ ಸುಮಾರು 4.45ಕ್ಕೆ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ ಇಂಡಿಗೋ ವಿಮಾನ ಹೊರಡಲು ತಯಾರಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಶಹಾಪುರದ ನಿರಂಜನ ಕಾರಗಿ ಎಂಬ ಪ್ರಯಾಣಿಕ ತನ್ನ ಆಸನ ಪಕ್ಕದಲ್ಲಿದ್ದ ಎಮರ್ಜೆನ್ಸಿ ಎಕ್ಸಿಟ್ ಡೋರ್ ಅನ್ನು ತೆಗೆದಿದ್ದಾನೆ.
ಈ ತುರ್ತು ಬಾಗಿಲು ತೆರೆಯದಂತೆ ಪ್ರಯಾಣಿಕರಿಗೆ ಮೊದಲೇ ಸೂಚಿಸಲಾಗಿತ್ತು. ಆದರೂ, ನಿರ್ಲಕ್ಷತನದಿಂದ ಬಾಗಿಲು ತೆಗೆದು, ಇತರ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದಾನೆ ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

