By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಡ್ಯದಲ್ಲಿ ’87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ : ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮಂಡ್ಯದಲ್ಲಿ ’87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ : ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ
BlogLatestMain PostTop Storiesರಾಜ್ಯ-Karnataka

ಮಂಡ್ಯದಲ್ಲಿ ’87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ : ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ

Kannada Sahitya Sammelana

Published August 16, 2024
Share
3 Min Read
Chaluvarayaswamy
SHARE

ಮಂಡ್ಯ: ’87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2024′ ರ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನಿದ್ಯದಲ್ಲಿ ಚಾಲನೆ ನೀಡುವ ಮೂಲಕ ನಾಡುನುಡಿಯ ಹಬ್ಬಕ್ಕೆ ಮುನ್ನುಡಿ ಬರೆಯಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ, 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 28 ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆ ಜರುಗಿತು.

ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಸಭೆಯನ್ನುದ್ದೇಶಿಸಿ ಮಾತನಾಡಿ, ಇದು ಕನ್ನಡದ ಹಬ್ಬ. ಭಾಷೆಯ ಹಬ್ಬ. ಮಂಡ್ಯದಲ್ಲಿ ನೆರವೇರಲಿರುವ ಸಾಹಿತ್ಯ ಸಮ್ಮೇಳನ ನೆನಪಿನ ಉಳಿಯುವಂತಾಗಬೇಕು. ಕನ್ನಡ ಕಟ್ಟುವ ಹಬ್ಬವಾಗುವುದರ ಜೊತೆಗೆ ರಾಜ್ಯ ಮಾತ್ರವಲ್ಲದೆ ಇಂಡಿಯಾ ಕೂಡ ಮಂಡ್ಯದತ್ತ ತಿರುಗಿ ನೋಡವಂತಾಗಬೇಕು ಎಂದು ಕರೆಕೊಟ್ಟರು.

ಸಮ್ಮೇಳನದ ಯಶಸ್ವಿಗಾಗಿ ಸಲಹೆ, ಸೂಚನೆಗಳನ್ನು ಪಡೆಯಲು ಸಭೆ ಆಯೋಜಿಸಲಾಗಿದೆ. ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ‘ಬಾರಿಸು ಕನ್ನಡ ಡಿಂಡಿಮವ’ ಪದ್ಯದ ಸಾಲುಗಳನ್ನು ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.

ನಾಡ ಭಾಷೆ ಮರೆತರೆ ತಂದೆತಾಯಿಯನ್ನು ಮರೆತಂತೆ. ಕನ್ನಡ ಎಲ್ಲಾ ರಂಗದವರಿಗೆ ತಲುಪಲು ಕೋರ್ಸ್ ಗಳು ಶುರುವಾಗಬೇಕು. ಕನ್ನಡದ ಕೂಗು ಹೆಚ್ಚಾದ ನಂತರ ಇಂಜಿನಿಯರಿಂಗ್ ಕೋರ್ಸ್ ಗಳಲ್ಲಿ ಕನ್ನಡ ಕಲಿಕೆ ಆರಂಭವಾಯಿತು. ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಮಾಡಿದವರಿಗೆ ಕೆಲಸ ಸಿಗುವಂತಾಗಬೇಕು. ಕನ್ನಡದಲ್ಲಿ ಕಲಿತರೆ ಕೆಲಸ ಸಿಗುವಂತಾಗಬೇಕು. ಆಗ ಭಾಷೆ ಕಲಿಕೆಗೆ ಒಲವು ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಉದ್ಘಾಟನಾ ನುಡಿಗಳನ್ನಾಡಿದರು. ಕನ್ನಡ ಎಂದರೆ ಉತ್ಸಾಹ, ಚೈತನ್ಯ. ಮೂರನೇ ಬಾರಿ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಸಮಿತಿಗಳ ಸದಸ್ಯರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಸರ್ಕಾರ, ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತು ಒಟ್ಟಿಗೆ ಕೆಲಸ ಮಾಡಿದರೆ ಸಮ್ಮೇಳನ ಯಶಸ್ವಿಯಾಗಿ ನೆರವೇರಲಿದೆ ಎಂದರು.

ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ ರಾಜ್ಯದ ಮನೆಮಾತಾಗಬೇಕು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಇದು ಕನ್ನಡದ ಹಬ್ಬ, ಎಲ್ಲೂ ಅಚಾತುರ್ಯ ಆಗದಂತೆ ನೋಡಿಕೊಳ್ಳಬೇಕು. ಮಂಡ್ಯದ ಕೀರ್ತಿ ಬೆಳಗುವ ಕೆಲಸ ಆಗಬೇಕು ಎಂದು ಹೇಳಿದರು.

EOS-8 ಮಿಷನ್ ಯಶಸ್ವಿ ಉಡಾವಣೆ : ಇಸ್ರೋ ಮತ್ತೊಂದು ಮಹತ್ತರ ಸಾಧನೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ನಾಡೋಜ ಡಾ. ಮಹೇಶ್ ಜೋಶಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಂಡ್ಯ ಕನ್ನಡದ ಜಿಲ್ಲೆ. ಇಲ್ಲಿ ದೈವ ಸಂಕಲ್ಪ ಇದೆ. ಕರ್ನಾಟಕ ನಾಮಕರಣ ಆದ ನಂತರ ನಡೆದ ಮೊದಲ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನೆರವೇರಿತ್ತು ಎಂದರು.

ಇದು ಸಾಹಿತ್ಯ ಪರಿಷತ್ತು ಮಾಡುವ ಸಮ್ಮೇಳನ ಅಲ್ಲ. ಪ್ರತಿಯೊಬ್ಬ ಕನ್ನಡಿಗರು ಮಾಡುವ ಕನ್ನಡದ ಹಬ್ಬ. ಮಂಡ್ಯದಲ್ಲಿ ನಡೆಯುವ ಈ ಸಮ್ಮೇಳನ ಮುಂದಿನ ಸಮ್ಮೇಳನಗಳಿಗೆ ಮಾರ್ಗದರ್ಶಿ ಸೂಚಿಸುವ ಐತಿಹಾಸಿಕ ಸಮ್ಮೇಳನ ಆಗಬೇಕು. ನಮ್ಮ ಹಬ್ಬ ಎಂಬ ಭಾವನೆ ಪ್ರತಿಯೊಬ್ಬರಲ್ಲಿ ಮೂಡಿ ಕನ್ನಡದ ರಥ ಎಳೆಯುವ ಕಾರ್ಯ ಮಾಡಬೇಕು. ಈ ಸಮ್ಮೇಳನದಲ್ಲಿ ನೆಲ, ಜಲ, ಭಾಷೆಯ ಭಾವನೆ ಬಡಿದ್ದೆಬ್ಬಿಸುವ ಕೆಲಸ ಮಾಡಲಾಗುತ್ತದೆ. ಕನ್ನಡ ಅನ್ನದ ಭಾಷೆ ಆಗಬೇಕು, ಆಡಳಿತ ಕನ್ನಡ ಆಗಬೇಕು ಎಂದರು.

ಮಾಜಿ ಶಾಸಕ ಅನ್ನದಾನಿ ಮಾತನಾಡಿ, ಕನ್ನಡ ಸಾಹಿತ್ಯದ ವಿದ್ಯಾರ್ಥಿಯಾಗಿ ಭಾಗಿಯಾಗಿದ್ದೇನೆ. ಕಾವೇರಿ ವಿಚಾರದ ತಿಕ್ಕಾಟ ಸೇರಿದಂತೆ ನೆಲ, ಜಲ, ಭಾಷೆ , ಸಂಸ್ಕೃತಿ ತೋರಿಸಲು ಸಾಹಿತ್ಯ ಹಬ್ಬ ಆಚರಿಸಲಾಗುತ್ತಿದೆ. ಕೃಷಿ ಪ್ರಧಾನ ಜಿಲ್ಲೆಯಲ್ಲಿ ಕೃಷಿಗೆ ಸಂಬಂಧಿಸಿದಂತೆ ಚರ್ಚೆ, ವಿಚಾರ ಸಂವಾದಗಳು ಆಗಬೇಕು ಎಂದರು.

ಸಭೆಯಲ್ಲಿ ಶ್ರೀ ಶ್ರೀ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ವಿಧಾನಪರುಷತ್ ಸದಸ್ಯರುಗಳಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮೈಸೂರು ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಸಿ.ಡಿ.ಗಂಗಾಧರ್ ಸಮನ್ವಯ ಸಮಿತಿ ಅಧ್ಯಕ್ಷರಾದ ಮೀರ ಶಿವಲಿಂಗಯ್ಯ, ಮಾಜಿ ಸಚಿವ ಸೋಮಶೇಖರ್, ಮಾಜಿ ಶಾಸಕ ಅನ್ನದಾನಿ, ಮಾಜಿ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಸೇರಿದಂತೆ ಸಾಹಿತ್ಯ ಸಮ್ಮೇಳನ ಸಮಿತಿಗಳ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಸಿಇಒ, ಎಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದು ಪ್ರಾಣಬಿಟ್ಟ ವ್ಯಕ್ತಿ

ಟ್ಯಾಬ್ಲೆಟ್ ಮೂಲಕ ರಾಮನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದನ್ನು ವೀಕ್ಷಿಸಿದ ಮೋದಿ

ಘನ ಗುರುಸಿದ್ದೇಶ್ವರ ಜಾತ್ರೆ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು

ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

TAGGED:Kannada Sahitya SammelanaMandya
Share This Article
Facebook Copy Link Print
Previous Article ISRO EOS-8 ಮಿಷನ್ ಯಶಸ್ವಿ ಉಡಾವಣೆ : ಇಸ್ರೋ ಮತ್ತೊಂದು ಮಹತ್ತರ ಸಾಧನೆ
Next Article Shobha Karandlaje ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up