By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರು ದಸರಾದಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮೈಸೂರು ದಸರಾದಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

BlogLatestರಾಜ್ಯ-Karnataka

ಮೈಸೂರು ದಸರಾದಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

Mandya’s tableau during Dasara Procession bags first prize

Published October 15, 2024
Share
2 Min Read
Mandya’s tableau during Dasara procession bags first prize
SHARE

ಬೆಂಗಳೂರು : ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ.

ಸ್ತಬ್ಧಚಿತ್ರ ವಿಶೇಷತೆ
1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಐತಿಹಾಸಿಕ 39ನೇ ಅಧಿವೇಶನ ನಡೆದಿತ್ತು.ಈ ವರ್ಷ ಅಧಿವೇಶನಕ್ಕೆ 100 ವರ್ಷಗಳು ತುಂಬುತ್ತಿದೆ.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ” ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಜಂಬೂ ಸವಾರಿಯ ಸ್ತಬ್ದ ಚಿತ್ರ ಮೆರವಣಿಗೆಯಲ್ಲಿ ಈ ಎರಡು ಮಹತ್ವದ ಘಟನೆಗಳನ್ನು ಆಕರ್ಷಕವಾಗಿ ಬಿಂಬಿಸುವ ಸ್ತಬ್ದಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.

ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದರು. ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರೆನಿಸಿಕೊಂಡರು.

ಕಾಶಿನಾಥ್ ಪುತ್ರ ಅಭಿಮನ್ಯುಗೆ ಬೆಂಬಲವಾಗಿ ನಿಂತ ಕಿಚ್ಚ, “ಎಲ್ಲಿಗೆ ಪಯಣ ಯಾವುದೋ ದಾರಿ ಟ್ರೈಲರ್ ರಿಲೀಸ್

ಬಸವಣ್ಣನವರ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ”ಎಂದು ಘೋಷಿಸಿ ಮಹತ್ವದ ಹೆಜ್ಜೆಯನ್ನಿಟ್ಟರು. ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶಿಸಿದರು.

ಈ ಮಹತ್ವದ ಘಟನೆಗೆ ಸಾಕ್ಷಿಯೆಂಬಂತೆ ಸ್ತಬ್ದಚಿತ್ರದ ಮುಂಭಾಗದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವಣ್ಣ ಅವರ ಮಾದರಿ ಪ್ರತಿಕೃತಿಯನ್ನು ಚಿತ್ರಿಸಲಾಗಿತ್ತು. ಬಸವಣ್ಣನವರು ಕುಳಿತ ಪೀಠದ ಕೆಳಭಾಗದಲ್ಲಿ ಕೂಡಲಸಂಗಮದ ಮುಖ್ಯದ್ವಾರದ ಮಾದರಿಯನ್ನು ಚಿತ್ರಿಸಲಾಗಿತ್ತು.

ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನವು ಒಂದು ಮಹತ್ವದ ಘಟನೆಯಾಗಿದೆ. ಇದು ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನವಾಗಿತ್ತು. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಏಕತೆಯನ್ನು ಪುನಃಸ್ಥಾಪಿಸುವುದು. ಅಸ್ಪೃಶ್ಯತೆ ಮತ್ತು ಇತರ ವಿಷಯಗಳ ಜೊತೆಗೆ ಚರಕ ಮತ್ತು ಖಾದಿಯ ಪ್ರಾಮುಖ್ಯತೆಯನ್ನು ಒತ್ತಿಹೇಳುವುದು ಅವರ ಪ್ರಾಥಮಿಕ ಉದ್ದೇಶವಾಗಿತ್ತು. ರಾಷ್ಟ್ರೀಯ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಸಂಪೂರ್ಣ ಆವರಣವನ್ನು ವಿಜಯನಗರ ಎಂದು ಹೆಸರಿಸಲಾಗಿತ್ತು.

ಬಿಳಿ, ಹಸಿರು, ಕೇಸರಿ ಮತ್ತು ಧ್ವಜದ ಮಧ್ಯ ಭಾಗದಲ್ಲಿ ಚರಕ ಇರುವ ತ್ರಿವರ್ಣ ಧ್ವಜವನ್ನು ಇಲ್ಲಿ ಮೊದಲಬಾರಿಗೆ ಹಾರಿಸಿದರು. ಇದರ ಮಾದರಿ ಪ್ರತಿಕೃತಿಯನ್ನು ಮಧ್ಯ ಭಾಗದಲ್ಲಿ ತೋರಿಸಲಾಗಿದೆ. ಅಧಿವೇಶನವು ಮರದ ಚೌಕಟ್ಟುಗಳಿಂದ ಸುತ್ತುವರಿದ ಎತ್ತರದ ವೇದಿಕೆಯಲ್ಲಿ ಮಹಾತ್ಮ ಗಾಂಧಿಯವರು ತಮ್ಮ ಅಧ್ಯಕ್ಷೀಯ ಭಾಷಣವನ್ನು ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಭಾಷಣವನ್ನು ವೀಕ್ಷಿಸುತ್ತಿರುವ ಮಾದರಿ ಪ್ರತಿಕೃತಿಯನ್ನು ಮಧ್ಯ ಹಾಗೂ ಹಿಂಭಾಗದಲ್ಲಿ ವಿನ್ಯಾಸಗೊಳಿಸಲಾಗಿತ್ತು.

ಸ್ತಬ್ಧಚಿತ್ರದ ಕೆಳಭಾಗದ ಎರಡು ಕಡೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸ್ವರಾಜ್ಯ ಬಿಂಬಿಸುವ ಧ್ವಜವನ್ನು ಕೈಯಲ್ಲಿ ಹಿಡಿದಿರುವ ಮಾದರಿಯನ್ನು ಚಿತ್ರಿಸಲಾಗಿತ್ತು. ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಧೈಯವಾಕ್ಯದೊಮಾಹಿತಿ ಆರಂಭಗೊಂಡ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿಯ ಬಗ್ಗೆ ಮಾಹಿತಿ ಫಲಕ‌ ಅಳವಡಿಸಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಪರಿಕಲ್ಪನೆಯಂತೆ ,ಕ್ಷೇತ್ರ ಪ್ರಚಾರ ಶಾಖೆ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ.ಅವರು ಸ್ತಬ್ಧಚಿತ್ರ ನಿರ್ಮಾಣಕ್ಕೆ ಶ್ರಮಿಸಿದ್ದರು, ಪ್ರತಿರೂಪಿ ಕಲಾತಂಡದ ಶಶಿಧರ ಅಡಪ ಮತ್ತು ತಂಡದ ಕಲಾವಿದರು ಸ್ತಬ್ಧಚಿತ್ರ ತಯಾರಿಸಿದ್ದರು.

You Might Also Like

ಸೆ 27ರಂದು ತುಮಕೂರು – ಯಶವಂತಪುರ ಮೆಮು ರೈಲಿಗೆ ಚಾಲನೆ

ಇನ್ನು ಮುಂದೆ ಭಾರತದ ನೀರು ಭಾರತದಲ್ಲೇ ಹರಿಯಲಿದೆ : ಪಾಕ್ ವಿರುದ್ಧ ಮೋದಿ ಗುಡುಗು

ಪತ್ನಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿಯಾದ ಐಎಎಸ್ ಅಧಿಕಾರಿ

ಮೈಗೆ ನಿಂಬೆ ಹಣ್ಣು, ತ್ರಿಶೂಲ ಚುಚ್ಚಿಕೊಂಡವರಿಗೆ ಬುದ್ಧಿವಾದ ಹೇಳಿದ ಶಾಸಕ

ಏಳು ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ವಿಜೇತ ಬಾಡಿ ಬಿಲ್ಡರ್ ಮಯಾಂಕ್ ಪವಾರ್ ನಿಧನ

TAGGED:Dasara ProcessionMandya
Share This Article
Facebook Copy Link Print
Previous Article Ellige Payana Yavudo Daari ಕಾಶಿನಾಥ್ ಪುತ್ರ ಅಭಿಮನ್ಯುಗೆ ಬೆಂಬಲವಾಗಿ ನಿಂತ ಕಿಚ್ಚ, “ಎಲ್ಲಿಗೆ ಪಯಣ ಯಾವುದೋ ದಾರಿ ಟ್ರೈಲರ್ ರಿಲೀಸ್
Next Article priyanka gandhi copy priyanka gandhi copy priyanka gandhi copy ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up