By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ..!

BlogLatestMain PostTop Storiesರಾಷ್ಟ್ರೀಯ-National

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ..!

Manmohan Singh: Former Indian Prime Minister dies at 92

Published December 27, 2024
Share
9 Min Read
Manmohan-Singh Passed Away
SHARE

ನವದೆಹಲಿ : ಭಾರತದ ಆರ್ಥಿಕ ಸುಧಾರಣೆಯ ಹರಿಹಾರ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ತಮ್ಮ 92 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ಸಂಜೆ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 8 ಎಂಟು ಗಂಟೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ 9.51ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 2004 ರಿಂದ 2014 ರವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ 33 ವರ್ಷಗಳ ನಂತರ ರಾಜ್ಯಸಭೆಯಿಂದ ನಿವೃತ್ತರಾಗುವ ಮೂಲಕ ರಾಜಕೀಯದಿಂದ ದೂರ ಸರಿದಿದ್ದರು.ಐದು ಅವಧಿಗೆ ಮೇಲ್ಮನೆಯಲ್ಲಿ ಅಸ್ಸಾಂ ಅನ್ನು ಪ್ರತಿನಿಧಿಸಿದ್ದ ಅವರು 2019 ರಲ್ಲಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶಿಸಿದ್ದರು.

ಡಾ ಮನಮೋಹನ್ ಸಿಂಗ್ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ, ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.

ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಯನ್ನು ಅಲಂಕಾರಿಸದರು ಮತ್ತು ಮಾಜಿ ಪ್ರಧಾನಮಂತ್ರಿ ನರಸಿಂಹ ರಾವ್ ಅವರ ಆರ್ಥಿಕ ಸಲಹೆಗಾರರಾದರು. ಭಾರತೀಯ ರಿಸರ್ವ್ ಬ್ಯಾಂಕ್ , ನಿರ್ದೇಶಕರಾಗಿ (1976-80) ಮತ್ತು ಗವರ್ನರ್ (1982–85) ಸೇವೆ ಸಲ್ಲಿಸಿದ್ದರು.
ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾಗಿ 1972 ರಲ್ಲಿ ಬಡ್ತಿ ಪಡೆದರು. UNCTAD ಸೆಕ್ರೆಟರಿಯೇಟ್‌ನಲ್ಲಿ ಅವರನ್ನು ದಕ್ಷಿಣ ಆಯೋಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

1990 ರಿಂದ ಜಿನೀವಾ ಇದರ ಜೊತೆಗೆ, ಡಾ ಸಿಂಗ್ ಅವರು ಹಣಕಾಸು ಸಚಿವಾಲಯದ ಕಾರ್ಯದರ್ಶಿ, ಯೋಜನಾ ಆಯೋಗದ ಉಪಾಧ್ಯಕ್ಷ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ ಸ್ಥಾನಗಳನ್ನು ಸಹ ನಿರ್ವಹಿಸಿದ್ದರು.ಮೇ 2004 ರ ಸಂಸತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸಿತು. ಕಾಂಗ್ರೆಸ್‌ನ ನಾಯಕಿ, ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ನಿರಾಕರಿಸಿದರು, ಬದಲಿಗೆ ಸಿಂಗ್ ಅವರನ್ನು ಹುದ್ದೆಗೆ ಶಿಫಾರಸು ಮಾಡಿದ್ದರು.

ಭಾರತದ ಹೆಚ್ಚುತ್ತಿರುವ ಇಂಧನ ಬೇಡಿಕೆಗಳನ್ನು ಪೂರೈಸುವ ಪ್ರಯತ್ನದಲ್ಲಿ, ಸಿಂಗ್ 2005 ರಲ್ಲಿ US ಅಧ್ಯಕ್ಷ ಜಾರ್ಜ್ ಬುಷ್ ಅವರೊಂದಿಗೆ ಪರಮಾಣು ಸಹಕಾರ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದ್ದರು. ಮೇ 2009 ರ ಸಂಸತ್ತಿನ ಚುನಾವಣೆಯಲ್ಲಿ, ಕಾಂಗ್ರೆಸ್ ಶಾಸಕಾಂಗದಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿತು ಮತ್ತು ಸಿಂಗ್ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2014 ರ ಆರಂಭದಲ್ಲಿ ಸಿಂಗ್ ಅವರು ಲೋಕಸಭೆಗೆ ನಡೆಯುವ ಚುನಾವಣೆಯಲ್ಲಿ ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಲು ಬಯಸುವುದಿಲ್ಲ ಎಂದು ಘೋಷಿಸಿದರು. ಮೇ 26ರಂದು ಬಿಜೆಪಿಯ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಅವರು ಅಧಿಕಾರ ತೊರೆದಿದ್ದರು.

ಜನನ ಹಾಗೂ ಜೀವನ :
ಪಂಜಾಬ್‌ನಲ್ಲಿ ಸೆಪ್ಟೆಂಬರ್ 26, 1932ರಂದು ಜನಿಸಿದರು. ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿಯಾಗಿ ಮನಮೋಹನ್ ಸಿಂಗ್‌ 2004ರಿಂದ 2014ರ ವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಏಕೈಕ ಅಲ್ಪಸಂಖ್ಯಾತರೊಬ್ಬರು ಅಂದ್ರೆ ಸಿಖ್‌ ಸಮುದಾಯದವರು ಪ್ರಧಾನಮಂತ್ರಿಯಾಗಿರೋ ಕೀರ್ತಿ ಮನಮೋಹನ್‌ ಸಿಂಗ್‌ ಅವರಿಗೆ ಸಲ್ಲುತ್ತದೆ.

ಮನಮೋಹನ್‌ ಸಿಂಗ್ ಅವರು ಚಂಡೀಗಢದ ವಿಶ್ವವಿದ್ಯಾಲಯ ಮತ್ತು ಗ್ರೇಟ್‌ ಬ್ರಿಟನ್‌ ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ವ್ಯಾಂಸಗ ಮಾಡಿದ್ರು. ನಂತರ ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹಾ ಹುದ್ದೆಗಳ ಸರಣಿಗೆ ಹೆಸರುವಾಸಿಯಾಗಿದ್ದರು. ಮನಮೋಹನ್‌ ಸಿಂಗ್ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕರಾಗಿ (1976–80) ಹಾಗೂ ಆರ್‌‌ಬಿಐ ಗವರ್ನರ್ (1982–85) ಸೇವೆ ಸಲ್ಲಿಸಿದ್ದರು.

ಮೇ 2009 ಸಂಸತ್ತಿನ ಚುನಾವಣೆಯಲ್ಲಿ ಎರಡನೇ ಬಾರಿ ಪ್ರಧಾನ ಮಂತ್ರಿಯಾದರು. 2014ರ ಲೋಕಾಸಭೆ ಚುನಾವಣೆಗೂ ಮುನ್ನ ನಾನು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗೋದಿಲ್ಲ ಅಂತ ಹೇಳಿದ್ದರಂತೆ.ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್‌ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಆರ್ಥಿಕ ಚತುರ ಅಂತಲೇ ಎಲ್ಲರೂ ಕರೆಯುತ್ತಿದ್ದರು.

ಮನಮೋಹನ್ ಸಿಂಗ್ ಅವರಿಗೆ ಲಭಿಸಿದ ಪ್ರಶಸ್ತಿಗಳು :
ಮನಮೋಹನ್ ಸಿಂಗ್ ಅವರಿಗೆ ಅಣ್ಣಾಸಾಹೇಬ್ ಚಿರ್ಮುಲೆ ಪ್ರಶಸ್ತಿಯನ್ನು ಡಬ್ಲ್ಯು.ಎಲ್.ಜಿ. ಅಲಿಯಾಸ್ ಅಣ್ಣಾಸಾಹೇಬ್ ಚಿರ್ಮುಲೆ ಟ್ರಸ್ಟ್ ಅನ್ನು ಯುನೈಟೆಡ್ ವೆಸ್ಟರ್ನ್ ಬ್ಯಾಂಕ್ ಲಿಮಿಟೆಡ್, ಸತಾರಾ, ಮಹಾರಾಷ್ಟ್ರದಿಂದ ನೀಡಲಾಗಿತ್ತು. 1999 ಮನಮೋಹನ್ ಸಿಂಗ್ ಅವರು ಶ್ರೇಷ್ಠತೆಗಾಗಿ HH ಕಂಚಿ ಶ್ರೀ ಪರಮಾಚಾರ್ಯ ಪ್ರಶಸ್ತಿಯನ್ನು ಪಡೆದರು. 1999 ಮನಮೋಹನ್ ಸಿಂಗ್ ಅವರು ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ನವದೆಹಲಿಯ ಫೆಲೋ ಪಡೆದರು. ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.
ಮನಮೋಹನ್ ಸಿಂಗ್ ಅವರು 1964 ರಲ್ಲಿ ಇಂಡಿಯಾಸ್ ಎಕ್ಸ್‌ಪೋರ್ಟ್ ಟ್ರೆಂಡ್ಸ್ ಮತ್ತು ಪ್ರಾಸ್ಪೆಕ್ಟ್ಸ್ ಫಾರ್ ಸೆಲ್ಫ್-ಸಸ್ಟೈನ್ಡ್ ಗ್ರೋತ್ ಎಂಬ ಪುಸ್ತಕವನ್ನು ಬರೆದರು. ಅವರು ಅರ್ಥಶಾಸ್ತ್ರದ ನಿಯತಕಾಲಿಕಗಳ ಶ್ರೇಣಿಯಲ್ಲಿ ಪ್ರಕಟವಾದ ಅನೇಕ ಲೇಖನಗಳನ್ನು ಸಹ ಬರೆದಿದ್ದಾರೆ.

ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿ ಎಂಬ ಬಿರುದನ್ನು ಗಳಿಸಿದವರು ಮನಮೋಹನ್‌ಸಿಂಗ್. ಕಾಂಗ್ರೆಸ್‌ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಕಾಂಗ್ರೆಸ್‌ನಿಂದಲೇ ಪ್ರಧಾನ ಮಂತ್ರಿ ಕೂಡ ಆಗಿದ್ದರು. 10 ವರ್ಷಗಳ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌‌ ಭಾರತದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದ್ದರಿ. ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿದ್ದರು.

ದೇಶದ ಆರ್ಥಿಕತೆ, ಭವಿಷ್ಯ ಬದಲಾಯಿಸಿದ ನಿರ್ಧಾರಗಳು :
ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ ಸಾರ್ವಜನಿಕ ಜೀವನ ಮಹತ್ವದ್ದಾಗಿದೆ. 2004 ಮತ್ತು 2014 ರ ನಡುವೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು 5 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಅವುಗಳು ದೇಶದ ಜನರ ಭವಿಷ್ಯವನ್ನು ಬದಲಾಯಿಸಿದವಲ್ಲದೆ, ದೇಶದ ಆರ್ಥಿಕತೆಯ ಬೆಳವಣಿಗೆಗೂ ನೆರವಾದವು.

ನೇರ ಲಾಭ ವರ್ಗಾವಣೆ
: ನೇರ ಲಾಭ ವರ್ಗಾವಣೆ (DBT) ಅನ್ನು 1ನೇ ಜನವರಿ 2013 ರಂದು ದೇಶಕ್ಕೆ ಹೊಸ ವರ್ಷದ ಉಡುಗೊರೆಯಾಗಿ ಪ್ರಾರಂಭಿಸಿದರು. “ಸರ್ಕಾರವು ಜನರಿಗೆ 1 ರೂಪಾಯಿಯನ್ನು ಬಿಡುಗಡೆ ಮಾಡಿದಾಗ, ಅಂತಿಮವಾಗಿ ಉದ್ದೇಶಿತ ಫಲಾನುಭವಿಗೆ ಕೇವಲ 15 ಪೈಸೆ ಮಾತ್ರ ತಲುಪುತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಒಮ್ಮೆ ಹೇಳಿದ್ದರು. ಆದಕ್ಕೆ ಪರಿಹಾರವಾಗಿ ಸಿಂಗ್​ ಅವರು ನೇರ ಲಾಭ ವರ್ಗಾವಣೆ ಯೋಜನೆಯನ್ನು ತರುವ ಮೂಲಕ ಜನರಿಗೆ ತಲುಪ ಬೇಕಾದ ವಿಳಂಬವನ್ನು ತಪ್ಪಿಸಲು, ಸೋರಿಕೆಯನ್ನು ತಡೆಗಟ್ಟಲು ಮತ್ತು ಹೆಚ್ಚು ಪಾರದರ್ಶಕತೆಯನ್ನು ಈ ಯೋಜನೆ ತಂದಿದೆ.

ಆಧಾರ್‌ ಕಾರ್ಡ್‌ :
ಸಾಮಾನ್ಯವಾಗಿ ಪ್ರತಿಯೊಬ್ಬ ನಾಗರಿಕನಿಗೂ ಇಂದು ಆಧಾರ್‌ ಕಾರ್ಡ್‌ ಬಹುಮುಖ್ಯ ದಾಖಲೆಯಾಗಿದೆ. UIDAI ನಾಗರಿಕರಿಗೆ ಈ ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ. ನಿಮ್ಮ ಫಿಂಗರ್‌ಪ್ರಿಂಟ್, ರೆಟಿನಾ ಸ್ಕ್ಯಾನ್ ಮತ್ತು ಆಧಾರ್ ಅನ್ನು ಅನುಮೋದಿಸಿದ ನಂತರವೇ ಆಧಾರ್‌ ಕಾರ್ಡ್‌‌ಗಳನ್ನು ನೀಡುತ್ತಾರೆ. ಈ ಯೋಜನೆಯನ್ನು ಜಾರೀಗೆ ತರುವ ಮೂಲಕ ಭಾರತದ ಏಕರೂಪದ ಗುರುತಿನ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದರು. ಇದರೊಂದಿಗೆ ನೇರಾವಾಗಿ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನೇರ ಲಾಭ ವರ್ಗಾವಣೆಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಅಗತ್ಯವನ್ನು ಡಾ. ಮನಮೋಹನ್ ಸಿಂಗ್ ಕಲ್ಪಿಸಿಕೊಂಡರು.

ಸಾಮಾನ್ಯವಾಗಿ ಪ್ರತಿಯೊಬ್ಬ ನಾಗರಿಕನಿಗೂ ಇಂದು ಆಧಾರ್‌ ಕಾರ್ಡ್‌ ಬಹುಮುಖ್ಯ ದಾಖಲೆಯಾಗಿದೆ. UIDAI ನಾಗರಿಕರಿಗೆ ಈ ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ. ನಿಮ್ಮ ಫಿಂಗರ್‌ಪ್ರಿಂಟ್, ರೆಟಿನಾ ಸ್ಕ್ಯಾನ್ ಮತ್ತು ಆಧಾರ್ ಅನ್ನು ಅನುಮೋದಿಸಿದ ನಂತರವೇ ಆಧಾರ್‌ ಕಾರ್ಡ್‌‌ಗಳನ್ನು ನೀಡುತ್ತಾರೆ. ಈ ಯೋಜನೆಯನ್ನು ಜಾರೀಗೆ ತರುವ ಮೂಲಕ ಭಾರತದ ಏಕರೂಪದ ಗುರುತಿನ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದರು. ಇದರೊಂದಿಗೆ ನೇರಾವಾಗಿ ಫಲಾನುಭವಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನೇರ ಲಾಭ ವರ್ಗಾವಣೆಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಅಗತ್ಯವನ್ನು ಡಾ. ಮನಮೋಹನ್ ಸಿಂಗ್ ಕಲ್ಪಿಸಿಕೊಂಡರು.

ಉದ್ಯೋಗ ಖಾತರಿ ಯೋಜನೆ
ಮನಮೋಹನ್ ಸಿಂಗ್ ಸರ್ಕಾರದ ಅತಿದೊಡ್ಡ ಆರ್ಥಿಕ ಸುಧಾರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (MNREGA). ಈ ಒಂದು ಕಾನೂನು ದೇಶದಲ್ಲಿ ವಲಸೆ ಸಮಸ್ಯೆಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಷ್ಟೇ ಅಲ್ಲ, ಈ ಕಾಯ್ದೆಯಡಿ ಗ್ರಾಮೀಣ ಪ್ರದೇಶದವರಿಗೆ, ಬಡವರಿಗೆ 100 ದಿನಗಳ ಉದ್ಯೋಗ ಖಾತರಿಪಡಿಸಲಾಯಿತು. ಈ ಕಾಯ್ದೆ 2008 ರ ಆರ್ಥಿಕ ಹಿಂಜರಿತದ ಸಮಯದಲ್ಲಿ ದೇಶದ ಗ್ರಾಮೀಣ ಆರ್ಥಿಕತೆಯನ್ನು ಉಳಿಸಲು ಸಹಾಯ ಮಾಡಿತು.

ಸಂಚಲನ ಸೃಷ್ಟಿಸಿದ ಮಾಹಿತಿ ಹಕ್ಕು ಕಾಯ್ದೆ
ಮನಮೋಹನ್ ಸಿಂಗ್ ಸರ್ಕಾರದಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದಿತ್ತು. ಆರ್ಥಿಕತೆಯಲ್ಲಿ ಪಾರದರ್ಶಕತೆ ತರುವಲ್ಲಿ ಈ ಕಾನೂನು ಉತ್ತಮ ಕೆಲಸ ಮಾಡಿದೆ. ಇದು ಸರ್ಕಾರದ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಾತರಿಪಡಿಸಿತು. ಇದು ಒಟ್ಟಾರೆ ಆರ್ಥಿಕತೆಗೆ ಉತ್ತಮ ಹೆಜ್ಜೆ ಎಂಬುದು ನಂತರದ ದಿನಗಳಲ್ಲಿ ಸಾಬೀತಾಯಿತು.

ಆಹಾರದ ಹಕ್ಕು
ಮನಮೋಹನ್ ಸಿಂಗ್ ಸರ್ಕಾರದಲ್ಲಿ ಮಾಡಿದ ಮತ್ತೊಂದು ಬಹು ದೊಡ್ಡ ಕೆಲಸವೆಂದರೆ ‘ಆಹಾರದ ಹಕ್ಕು’. ಇದರ ಅಡಿಯಲ್ಲಿ, ದೇಶದ ಬಡ ಜನರಿಗೆ ಸಬ್ಸಿಡಿ ದರದಲ್ಲಿ ಆಹಾರವನ್ನು ಒದಗಿಸುವ ನಿಯಮ ರೂಪಿಸಲಾಯಿತು. ದೇಶದ ಹೆಚ್ಚಿನ ಜನಸಂಖ್ಯೆಯು ಹಸಿವಿನ ಬಗ್ಗೆ ಚಿಂತಿಸದೆ ದೇಶದ ಆರ್ಥಿಕತೆಗೆ ಕೊಡುಗೆ ನೀಡಬಹುದು ಎಂಬುದು ಈ ನಿರ್ಧಾರದ ಹಿಂದಿನ ಮನಮೋಹನ್ ಯೋಚನೆಯಾಗಿತ್ತು. ಇಂದು ದೇಶದಲ್ಲಿ ಚಾಲನೆಯಲ್ಲಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಈ ಕ್ರಮದಿಂದಲೇ ರೂಪುಗೊಂಡಿದೆ. ಈ ಕಾನೂನು ಕೋವಿಡ್ ಸಮಯದಲ್ಲಿ ದೇಶದ ಬಡ ಜನರಿಗೆ ಸಾಕಷ್ಟು ಸಹಾಯ ಮಾಡಿದೆ ಎಂಬುದು ಗಮನಾರ್ಹ.

ಚಂದ್ರನಿಂದ ಮಂಗಳನತ್ತ ಹೆಜ್ಜೆ
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ದೇಶದ ಬಾಹ್ಯಾಕಾಶ ಆರ್ಥಿಕತೆಗೆ ಶಕ್ತಿ ತುಂಬಲಾಯಿತು. ಅದೇ ಅವಧಿಯಲ್ಲಿ, ದೇಶದ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಬಾಹ್ಯಾಕಾಶ ನೌಕೆಯನ್ನು ಚಂದ್ರ ಮತ್ತು ಮಂಗಳ ಗ್ರಹಕ್ಕೆ ಕಳುಹಿಸಿತು. ಈ ಒಂದು ಹೆಜ್ಜೆ ಭಾರತಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸುವ ಶಕ್ತಿಯನ್ನು ನೀಡಿತು. ಭಾರತದ ಮಾನವಸಹಿತ ಬಾಹ್ಯಾಕಾಶ ಯಾತ್ರೆಯ ರೂಪುರೇಷೆಯನ್ನು ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಯಿತು.

ಇಂಡೋ-ಅಮೆರಿಕ ಪರಮಾಣು ಒಪ್ಪಂದ
ಬಹುಶಃ, ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರದ ಅಡಿಯಲ್ಲಿ ಭಾರತದ ಅತಿದೊಡ್ಡ ಸಾಧನೆಗಳಲ್ಲಿ ಭಾರತ ಮತ್ತು ಅಮೆರಿಕ ಪರಮಾಣು ಒಪ್ಪಂದ (ಭಾರತ ನಾಗರಿಕ ಪರಮಾಣು ಒಪ್ಪಂದಕ್ಕೆ) ಸಹಿ ಹಾಕಿದರು. ಇದರೊಂದಿಗೆ ಭಾರತವು ಪರಮಾಣು ಇಂಧನ ಮತ್ತು ತಂತ್ರಜ್ಞಾನವನ್ನು ಖರೀದಿಸಲು ಮತ್ತು ಅವುಗಳನ್ನು ಮಾರಾಟ ಮಾಡಲು ಅವಕಾಶ ನೀಡಿತು. ಇದು ಮನಮೋಹನ್ ಸಿಂಗ್ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

ಪೋಲಿಯೊ ನಿರ್ಮೂಲನೆ
ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವಾಗಿ ಮಾಡುವಲ್ಲಿ 2004 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಶ್ರಮಿಸಿದ ಅವರು, ಕೊನೆಗೆ ಭಾರತವು ತನ್ನ ಕೊನೆಯ ಪೋಲಿಯೊ ಪ್ರಕರಣವನ್ನು 13 ಜನವರಿ 2011 ರಂದು ದಾಖಲಿಸಿತ್ತು. ಇದರೊಂದಿಗೆ ಇವರ ಆಡಳಿತಾವಧಿಯಲ್ಲಿ ಭಾರತ ಫೆಬ್ರವರಿ 24, 2012 ರಂದು ವಿಶ್ವ ಆರೋಗ್ಯ ಸಂಸ್ಥೆ (WHO)ಯಿಂದ ಪ್ರಮಾಣ ಪಡೆಯಿತ್ತು.

ಕೌಶಲಾಭಿವೃದ್ಧಿ
ದೇಶದ ಆರ್ಥಿಕತೆ, ಯುವಕರು ಮತ್ತು ಭವಿಷ್ಯದ ಅಗತ್ಯಗಳನ್ನು ಅರ್ಥಮಾಡಿಕೊಂಡ ಮನಮೋಹನ್ ಸಿಂಗ್ ಸರ್ಕಾರವು ಕೌಶಲಾಭಿವೃದ್ಧಿ ನಿಟ್ಟಿನಲ್ಲಿಯೂ ಕೆಲಸ ಮಾಡಿದೆ. ಅವರ ಅಧಿಕಾರಾವಧಿಯಲ್ಲಿಯೇ ಕೌಶಲಾಭಿವೃದ್ಧಿ ಮಿಷನ್‌ನ ಅಡಿಪಾಯವನ್ನು ಹಾಕಲಾಯಿತು. ಅದು ಇಂದು ಕೌಶಲಾಭಿವೃದ್ಧಿ ಸಚಿವಾಲಯದ ರೂಪವನ್ನು ಪಡೆದುಕೊಂಡಿದೆ. ಅವರ ಸರ್ಕಾರದ ಈ ಹೆಜ್ಜೆ ಆರ್ಥಿಕತೆಯ ಬೆಳವಣಿಗೆಯ ದೃಷ್ಟಿಕೋನದಿಂದ ಬಹಳ ಮುಖ್ಯವಾಗಿತ್ತು, ಏಕೆಂದರೆ ಇದು ದೇಶದ ಬೆಳೆವಣಿಗೆ ಹೊಂದುತ್ತಿರುವ ಆರ್ಥಿಕತೆಗೆ ನುರಿತ ಕಾರ್ಯಪಡೆಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿತ್ತು.


ಒಂದೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮನಮೋಹನ್ ಸಿಂಗ್ :
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಮ್ಮ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಚುನಾವಣೆಗೆ ಸ್ಪರ್ಧಿಸಿದ್ದರು, ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ. 1999ರ ಲೋಕಸಭೆ ಚುನಾವಣೆ ಸಂದರ್ಭದ ಘಟನೆ. 1996 ರಿಂದ ಅಧಿಕಾರದಿಂದ ಹೊರಗುಳಿದಿದ್ದ ಕಾಂಗ್ರೆಸ್ ಅನ್ನು ಮರಳಿ ತರಲು ಸೋನಿಯಾ ಗಾಂಧಿ ಅವರು ತಮ್ಮ ಎಲ್ಲ ಹಿರಿಯ ನಾಯಕರನ್ನು ಚುನಾವಣೆಯಿಂದ ಕಣಕ್ಕಿಳಿಸಲು ನಿರ್ಧರಿಸಿದ್ದರು. ಅಂದು ಸೋನಿಯಾ ಗಾಂಧಿಯೇ ಕಾಂಗ್ರೆಸ್​ ಅಧ್ಯಕ್ಷರಾಗಿದ್ದರು.

ಸೋನಿಯಾ ಅವರ ಒತ್ತಾಯದ ಮೇರೆಗೆ ಮನಮೋಹನ್ ಸಿಂಗ್ ಕೂಡ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಕೊಂಡಿದ್ದರು. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಿದ ಅನುಭವ ಅಷ್ಟು ಚೆನ್ನಾಗಿಲ್ಲದ ಕಾರಣ, ಅವರು ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿಲ್ಲ.

ಮನಮೋಹನ್ ಸಿಂಗ್ 1999ರ ಚುನಾವಣೆಯಲ್ಲಿ ಸುಮಾರು 30 ಸಾವಿರ ಮತಗಳಿಂದ ಸೋತಿದ್ದರು.ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿಜಯ್ ಮಲ್ಹೋತ್ರಾ 261230 ಮತ್ತು ಕಾಂಗ್ರೆಸ್‌ನ ಮನಮೋಹನ್ ಸಿಂಗ್ 231231 ಮತಗಳನ್ನು ಪಡೆದರು. ಮನಮೋಹನ್ ಅವರಿಗೆ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಸೋಲಾಗಿತ್ತು.

ಇದಾದ ನಂತರ ಅವರು ತಮ್ಮ ಚುನಾವಣಾ ವೃತ್ತಿಜೀವನ ಪ್ರಾರಂಭವಾದ ತಕ್ಷಣ ಮುಗಿದಿದೆ ಎಂದು ಭಾವಿಸಿದ್ದರು. ಮನಮೋಹನ್ ಸಿಂಗ್ ಅವರು ತಮ್ಮ ರಾಜ್ಯಸಭಾ ಸ್ಥಾನದಲ್ಲಿ ಉಳಿದರು. ಅಷ್ಟೇ ಅಲ್ಲ, ಕಾಂಗ್ರೆಸ್ ಅವರನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನಾಗಿಯೂ ಇರಿಸಿತ್ತು.

2004 ರಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಮನಮೋಹನ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಿತು, ಆದರೆ ಅವರು ನಿರಾಕರಿಸಿದರು ಮತ್ತು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ.

You Might Also Like

2 ವರ್ಷಗಳಿಂದ ಭಾರಿ ವಾಹನಗಳಿಗೆ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್‌ ಇಂದಿನಿಂದ ರೀಓಪನ್

BPL Ration Card : ಕಾರ್‌ ಹೊಂದಿದವರ ಬಿಪಿಎಲ್‌ ರೇಷನ್ ಕಾರ್ಡ್ ರದ್ದು

ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ

ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ ಪಶ್ಚಾತ್ತಾಪ

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ಡ್ರೋನ್ ದಾಳಿ : ಬೆಂಗಳೂರಿನಿಂದ ಹೊರಟ ಎಮಿರೇಟ್ಸ್ ವಿಮಾನ ವಾಪಸ್

TAGGED:#Dr Manmohan SinghManmohan Singh
Share This Article
Facebook Copy Link Print
Previous Article Blood Donation ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ರಕ್ತ ದಾನ ಕಾರ್ಯಕ್ರಮ
Next Article Gas cylinder explosion: Number of dead Ayyappa devotees rises to 3 ಗ್ಯಾಸ್ ಸಿಲಿಂಡರ್ ಸ್ಪೋಟ : ಮೃತಪಟ್ಟ ಅಯ್ಯಪ್ಪ ಭಕ್ತರ ಸಂಖ್ಯೆ 3ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up