By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ : ಸಿಎಂ ಸಿದ್ದರಾಮಯ್ಯ

BlogLatestರಾಜ್ಯ-Karnataka

ಮನಮೋಹನ್ ಸಿಂಗ್ ಭಾರತ ಕಂಡ ಪ್ರಾಮಾಣಿಕ ಪ್ರಧಾನಿ : ಸಿಎಂ ಸಿದ್ದರಾಮಯ್ಯ

Manmohan Singh was the most honest Prime Minister India has ever seen: CM Siddaramaiah

Published December 27, 2024
Share
2 Min Read
Manmohan Singh
SHARE

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು.

ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು.

ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು.ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

ಮನಮೋಹನ್ ಸಿಂಗ್ ರವರೊಂದಿಗಿನ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಧಾನಿಯಾಗಿದ್ದಾಗ ಭೇಟಿ ಮಾಡಿದ್ದೂ, ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ, ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದರು.

You Might Also Like

VIDEO : ಕನಕಪುರ ತಾಲೂಕಿನ ತೋಟಹಳ್ಳಿಯಲ್ಲಿ ಮನೆಯೊಂದರಲ್ಲಿ ನಾಯಿ ರಕ್ತ ಹೀರಿದ ಚಿರತೆ

ಬೆಲೆ ಏರಿಕೆ ಬಿಸಿಯಿಂದ ಆರ್ಥಿಕ ಸಂಕಷ್ಟದಲ್ಲಿ ಆಟೋ ಚಾಲಕರು

ಕೊನೆಗೂ ಕಾರ್ಯಾಚರಣೆ ಯಶಸ್ವಿ – ಸಾತ್ವಿಕ್‌ಗೆ ಸ್ವಾಗತ

ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ

ಬೆಂಗಳೂರು : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

TAGGED:Manmohan Singh
Share This Article
Facebook Copy Link Print
Previous Article Charit Balappa ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕಿರುತೆರೆ ನಟ ಚರಿತ್ ಅರೆಸ್ಟ್
Next Article Manmohan Singh Rahul ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್, ಸೋನಿಯಾ, ಪ್ರಿಯಾಂಕಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up