ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ) ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಸ್ಥಿತಿ ಗಂಭೀರವಾಗಿದೆ.
ಎಂಆರ್‌ವಿ ಶಾಲೆಯ ಬಳಿಯ ಸೆಕ್ಟರ್ -13ರ ಶಾಬಾದ್ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ
ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡದ ಬಗ್ಗೆ ಬೆಳಗ್ಗೆ 10 ಗಂಟೆಯ ಸುಮಾರಿಗೆ ಕರೆ ಬಂತು. ತಕ್ಷಣವೇ ಎಂಟು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಅಂಬುಲೆನ್ಸ್ ಘಟನಾ ಸ್ಥಳದಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದಿಲ್ಲ.
ಮೂವರ ಸಾವು :
ದೆಹಲಿಯ ಅಪಾರ್ಟ್ಮೆಂಟ್ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಹುಮಹಡಿ ಕಟ್ಟಡದ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿದ್ದು, 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು, ಒಬ್ಬ ಹುಡುಗ ಮತ್ತು ಹುಡುಗಿ ಸಾವನ್ನಪ್ಪಿದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ನಂತರ, ಅವರ ತಂದೆ ಯಶ್ ಯಾದವ್ ಕೂಡ ಬಾಲ್ಕನಿಯಿಂದ ಹಾರಿ ಐಜಿಐ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

