ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಮುಖಂಡರು ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಿದರು… ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಿಂದ ಗಾಂಧಿ ಚೌಕ್ ವರೆಗೆ ಪ್ರತಿಭಟನಾ ಜಾತ ನಡೆಸಿದ ಹಿಂದೂ ಸಂಘಟನೆಗಳ ಮುಖಂಡರು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಪ್ರತಿ ಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಹಾಕಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಯತ್ನಾಳ್ ಅವರನ್ನು ಪಕ್ಷದಿಂದ ಹೊರಹಾಕುವ ಮೂಲಕ ಬಿಜೆಪಿ ಹೈಕೋರ್ಟ್ ದೊಡ್ಡ ತಪ್ಪು ಮಾಡಿದೆ.ಯತ್ನಾಳ್ ಅವರನ್ನು ಪಕ್ಷದಿಂದ ಹೊರಹಾಕಿದ ಆದೇಶವನ್ನು ಬಿಜೆಪಿ ಹೈಕೋರ್ಟ್ ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಮತ್ತು ಹಿಂದೂ ಮುಖಂಡರು ಪ್ರತಿಭಟನೆ ನಡೆಸಿದರು.

